ಸಮಾಜ ಕಾರ್ಯದಲ್ಲಿ ವೃತ್ತಿಯ ಅವಕಾಶಗಳು – ರಾಜ್ಯ ಮಟ್ಟದ ವೆಬಿನಾರ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಬೆಟ್ಟಂಪಾಡಿ: ಜು.27 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ, ಇಲ್ಲಿನ ಆಂತರಿಕ ಗುಣಮಟ್ಟದ ಭರವಸಾ ಕೋಶ, ಉದ್ಯೋಗ ಕೋಶ ಮತ್ತು ಸಮಾಜಕಾರ್ಯ ಅಧ್ಯಯನ ವಿಭಾಗದ ಸಂಯುಕ್ತಾಶ್ರಯದೊಂದಿಗೆ ಸಮಾಜ ಕಾರ್ಯದಲ್ಲಿ ವೃತ್ತಿಯ ಅವಕಾಶಗಳು ಎಂಬ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಮಟ್ಟದ ವೆಬಿನಾರ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ ವಹಿಸಿ ಸಮಾಜಕಾರ್ಯ ವಿಷಯದಲ್ಲಿ ಹಲವು ಕ್ಷೇತ್ರಗಳಿಂದ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶಗಳು ದೊರಕುತ್ತವೆ ಎಂದು ವಿವರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಡಾ. ನೂತನ ಬಿ.ಡಿ ಸಹಾಯಕ ಪ್ರಾದ್ಯಾಪಕಿ ಮತ್ತು ಕಾಲೇಜು ಶಿಕ್ಷಣ ಇಲಾಖೆಯ ಎಸ್‌ಕ್ಯೂಎಸಿ ವಿಭಾಗದ ಸಹಾಯಕ ನೂಡಲ್ ಅಧಿಕಾರಿಯವರು ಸಮಾಜ ಕಾರ್ಯ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ದೊರೆಯುವ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ವಿವರಿಸಿದರು. ಕಾರ್ಯಕ್ರಮವನ್ನು ಸಮಾಜಕಾರ್ಯ ವಿಭಾಗದ ಪ್ರಾದ್ಯಾಪಕರಾದ ಡಾ. ದೇವರಾಜ ಆರ್ ರವರು ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕರಾದ ಶ್ರೀ ದೀಕ್ಷಿತ್‌ಕುಮಾರ್‌ರವರು ತಾಂತ್ರಿಕ ಕಾರ್ಯವನ್ನು ನಿರ್ವಹಿಸಿದರು, ಪ್ರಾಧ್ಯಾಪಕಿಯಾದ ಶ್ರೀಮತಿ ಕಾವ್ಯ ಸ್ವಾಗತಿಸಿ, ಕಾಲೇಜಿನ ಐಕ್ಯೂಎಸಿ ಸಂಚಾಲಕರು ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಹರಿಪ್ರಸಾದ್ ಎಸ್ ರವರು ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.