HomePage_Banner
HomePage_Banner
HomePage_Banner
HomePage_Banner

ಅಂಬಿಕಾ ಪದವಿ ಕಾಲೇಜಿನಲ್ಲಿ ತರಬೇತಿ ಮತ್ತು ಉದ್ಯೋಗ ಘಟಕಕ್ಕೆ ಚಾಲನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಕ್ಯಾಂಪಸ್ ಸಂದರ್ಶನ ಆಯೋಜನೆ ಇಂದಿನ ಅಗತ್ಯ : ಸುರೇಶ್ ಶೆಟ್ಟಿ

ಪುತ್ತೂರು: ಹಿಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡುವ ಪದ್ಧತಿ ಇದ್ದಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ. ಪದವಿ ಹಂತದ ನಂತರ ಆಯಾ ಸಂಸ್ಥೆಗಳೇ ಆಸ್ಥೆವಹಿಸಿ ತಮ್ಮ ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸಿಕೊಡುವ ಪ್ರಯತ್ನಗಳನ್ನು ಮಾಡುತ್ತಿವೆ. ಇಂದಿನ ದಿನಮಾನಗಳಲ್ಲಿ ಅಂತಹದ್ದೊಂದು ಉಪಕ್ರಮದ ಅಗತ್ಯವೂ ಇದೆ ಎಂದು ನಗರದ ನಟ್ಟೋಜ ಫೌಂಡೆಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಸುರೇಶ್ ಶೆಟ್ಟಿ ಹೇಳಿದರು.

ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ತರಬೇತಿ ಮತ್ತು ಉದ್ಯೋಗ ಘಟಕವನ್ನು ಉದ್ಘಾಟನೆಗೈದು ಶುಕ್ರವಾರ ಮಾತನಾಡಿದರು.

ಇಂದು ಅನೇಕ ಶಿಕ್ಷಣ ಸಂಸ್ಥೆಗಳು ಕ್ಯಾಂಪಸ್ ಸಂದರ್ಶನಕ್ಕೆ ಆದ್ಯತೆ ನೀಡುತ್ತಿವೆ. ಹಾಗಾಗಿಯೇ ಆಯಾ ಸಂಸ್ಥೆಗಳ ಜಾಹೀರಾತುಗಳಲ್ಲಿ ತಮ್ಮ ಸಂಸ್ಥೆಗೆ ಸಂದರ್ಶನಕ್ಕಾಗಿ ಆಗಮಿಸುವ ಕಂಪೆನಿಗಳ ಬಹುದೊಡ್ಡ ಪಟ್ಟಿಯೇ ಇರುತ್ತದೆ. ಇದು ವಿದ್ಯಾರ್ಥಿಗಳನ್ನು ಸೆಳೆಯುವುದಕ್ಕೂ ಸಹಕಾರಿ. ತರಬೇತಿ ಮತ್ತು ಉದ್ಯೋಗ ಘಟಕವು ದಿನಪತ್ರಿಕೆಗಳಲ್ಲಿ ಪ್ರಕಟವಾಗುವ ಉದ್ಯೋಗ ಹಾಗೂ ನಾನಾ ವಿಧದ ತರಬೇತಿಗೆ ಸಂಬಂಧಿಸಿದ ಬರಹ, ಮಾಹಿತಿ, ಲೇಖನಗಳನ್ನು ಸಂಗ್ರಹಿಸಿಟ್ಟುಕೊಂಡು ಅದಕ್ಕನುಗುಣವಾಗಿ ವಿದ್ಯಾರ್ಥಿಗಳನ್ನು ರೂಪಿಸಬೇಕು ಎಂದು ಕರೆನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ ಮಾತನಾಡಿ ಪ್ರತಿಯೊಂದು ಸಂಸ್ಥೆಗೂ ತರಬೇತಿ ಮತ್ತು ಉದ್ಯೋಗ ಘಟಕ ಎಂಬುದು ಇಂದು ಅನಿವಾರ್ಯ ವಿಷಯವೆನಿಸಿದೆ. ನಮ್ಮ ನಮ್ಮ ವಿದ್ಯಾರ್ಥಿಗಳಿಗೆ ನಾವು ಉದ್ಯೋಗ ಕಲ್ಪಿಸಿಕೊಟ್ಟಾಗ ಮಾತ್ರ ಅವರಿಗೆ ಸಂಸ್ಥೆಯ ಮೇಲೆ ವಿಶ್ವಾಸ ಬರುವುದಕ್ಕೆ ಸಾಧ್ಯ. ಅಂಬಿಕಾ ಪದವಿ ಕಾಲೇಜು ಇನ್ನೂ ಒಂದು ಹಂತ ಮುಂದಕ್ಕೆ ಹೋಗಿ ಎಫ್‌ಡಿಎ ಹಾಗೂ ಎಸ್‌ಡಿಎ ಪರೀಕ್ಷೆಗಳ ತರಬೇತಿಯನ್ನು ವಿದ್ಯಾರ್ಥಿಗಳಿಗೆ ಪಠ್ಯಕ್ರಮದೊಂದಿಗೆ ಜೋಡಣೆ ಮಾಡಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸಿಕೊಡುವ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಪ್ರಯತ್ನ ಆರಂಭಗೊಳ್ಳಬೇಕು. ಕೇವಲ ಉದ್ಯೋಗ ದೊರಕಿಸಿಕೊಡುವುದು ಮಾತ್ರವಲ್ಲದೆ ಸ್ವಯಂಉದ್ಯೋಗ ತರಬೇತಿಯನ್ನೂ ಘಟಕದ ಮೂಲಕ ಹಮ್ಮಿಕೊಳ್ಳಬೇಕು. ಸ್ವಂತ ಉದ್ದಿಮೆ ಆರಂಭಿಸುವುದಕ್ಕೆ ಬೇಕಾದ ಮಾರ್ಗದರ್ಶನಗಳನ್ನು ಒದಗಿಸಿಕೊಟ್ಟು ಧೈರ್ಯತುಂಬಬೇಕು. ವಿವಿಧ ಉದ್ದಿಮೆಗಳಿಗೆ ಭೇಟಿ ನೀಡಿ ಅನುಭವ ದೊರಕಿಸಿಕೊಳ್ಳಬೇಕು ಎಂದು ನುಡಿದರು.

ಈ ಸಂದಲ್ಲಿ ತರಬೇತಿ ಮತ್ತು ಉದ್ಯೋಗ ಘಟಕಕ್ಕೆ ಸಹಾಯವಾಗುವಂತಹ ಕೆಲವು ಪುಸ್ತಕ ಹಾಗೂ ಪ್ರಕಟಣೆಗಳನ್ನು ಸುರೇಶ್ ಶೆಟ್ಟಿ ಅವರು ಸುಬ್ರಹಣ್ಯ ನಟ್ಟೋಜ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಗನೇಶ್ ಪ್ರಸಾದ್ ಎ, ಬೋಧಕ ಮತ್ತು ಬೋಧಕೇತರ ವೃಂದ ಉಪಸ್ಥಿತರಿದ್ದರು. ತರಬೇತಿ ಮತ್ತು ಉದ್ಯೋಗ ಘಟಕದ ಸಂಯೋಜಕಿ ಅನನ್ಯಾ ವಿ ಸ್ವಾಗತಿಸಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ್ ಕುಮಾರ್ ಕಮ್ಮಜೆ ವಂದಿಸಿ ಕಾರ್ಯಕ್ರಮ ನಿರ್ವಹಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.