ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಖಾಸಗಿ ವಿದ್ಯಾರ್ಥಿಗಳನ್ನೂ ಮುಂದಿನ ಹಂತಕ್ಕೆ ತೇರ್ಗಡೆಗೊಳಿಸುವಂತೆ ಆಗ್ರಹಿಸಿ ಶಿಕ್ಷಣ ಸಚಿವರಿಗೆ ಪತ್ರ ಬರೆದ ವಿದ್ಯಾರ್ಥಿಗಳು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುವಾಗ ಸರಕಾರ ಕೇವಲ ಖಾಸಗಿ ವಿದ್ಯಾರ್ಥಿಗಳಿಗೆ ಮಾತ್ರ ನಡೆಸುತ್ತಿದೆ. ಅನುತೀರ್ಣಗೊಂಡ ವಿದ್ಯಾರ್ಥಿಗಳೆಲ್ಲರನ್ನು ಯಾವುದೇ ಪರೀಕ್ಷೆ ನಡೆಸದೆ ಮುಂದಿನ ಹಂತಕ್ಕೆ ತೇರ್ಗಡೆಗೊಳಿಸಲಾಗಿದೆ, ಆದರೆ ಅವರ ಜೊತೆಗೆ ಬರೆಯುವ ಖಾಸಗಿ ವಿದ್ಯಾರ್ಥಿಗಳನ್ನು ಕಡೆಗಣನೆ ಮಾಡಲಾಗಿದೆ ಎಂದು ಅಳಲು ತೋಡಿಕೊಂಡಿರುವ ಪುತ್ತೂರಿನ ವಿದ್ಯಾರ್ಥಿಗಳು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಈ ರೀತಿಯ ಪರೀಕ್ಷಾ ವ್ಯವಸ್ಥೆ ಖಾಸಗಿ ವಿದ್ಯಾರ್ಥಿಗಳು ಹಾಗೂ ಹೊಸ ದಾಖಲಾದ ವಿದ್ಯಾರ್ಥಿಗಳ ಮಧ್ಯೆ ತಾರತಮ್ಯದ ಭಾವನೆಯನ್ನುಂಟು ಮಾಡಿದೆ. ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನಡೆಸಿ ಫಲಿತಾಂಶ ಬರುವ ಸಮಯಕ್ಕೆ ಕಾಲೇಜು ಸೀಟುಗಳು ಭರ್ತಿಯಾಗಿರುತ್ತವೆ, ಇದರಿಂದಾಗಿ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ತೀವ್ರವಾದ ಪರಿಣಾಮ ಬೀರುವ ಸಾಧ್ಯತೆ ಇದೆ
ಕೊರೋನ ಸಂಕಷ್ಟ ಸಮಯದಲ್ಲಿ ಖಾಸಗಿ ವಿದ್ಯಾರ್ಥಿಗಳಾದ ನಮ್ಮ ಮೇಲೆ ಶಿಕ್ಷಣ ಸಚಿವರು ಕರುಣೆ ತೋರಿಸಿ ನಮ್ಮನ್ನು ಕೂಡ ಮುಂದಿನ ಹಂತಕ್ಕೆ ತೇರ್ಗಡೆಗೊಳಿಸಬೇಕು ಎಂದು ಒತ್ತಾಯಿಸಿ ಶಿಕ್ಷಣ ಸಚಿವರಿಗೆ ೨೦೨೦-೨೧ ನೇ ಸಾಲಿನ ಖಾಸಗಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಪುತ್ತೂರಿನ ವಿದ್ಯಾರ್ಥಿಗಳು ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

1 Comment

  1. Malik

    Need the helpfull to private students.It is about their future,when their result will come that time the degree will be started and their future will be lost.The government students are passed with the SSLC and PUC marks then the private students also have SSLC certificates.The government should take a right decision.The private students have to be passed for this year.

    Reply

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.