ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ  ಉಚಿತ ಕೋವಿಡ್ ಲಸಿಕಾ ಶಿಬಿರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಸಮರ್ಥ ವಾಗಿ ಕೋವಿಡ್ ಅನ್ನು ನಿಭಾಯಿಸಲು ಕೇಂದ್ರ ಸರಕಾರ ಯಶಸ್ವಿಯಾಗಿದೆ : ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

ವಿಟ್ಲ: ಮಾಣಿ ಗ್ರಾಮ ಪಂಚಾಯತ್,  ಅಪೋಲೋ ಸ್ಪೇಷಾಲಿಟಿ ಹಾಸ್ಪಿಟಲ್ ಬೆಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ, ಕರ್ನಾಟಕ ಪ್ರೌಢ ಶಾಲೆ ಮಾಣಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮಾಣಿ, ರೋಟರಿ ಕ್ಲಬ್ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ನಡೆದ ಉಚಿತ ಕೋವಿಡ್ ಲಸಿಕಾ ಶಿಬಿರ ವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಸುಮಾರು 6 ಕೋಟಿ‌ ವೆಚ್ಚದಲ್ಲಿ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರ ವನ್ನು ಮೇಲ್ದರ್ಜೆಗೆ ಏರಿಸುವ ಬಗ್ಗೆ ಸರಕಾರ ಕ್ಕೆ ಪ್ರಸ್ತಾಪನೆ ಸಲ್ಲಿಸಲಾಗಿದೆ ಶೀಘ್ರವಾಗಿ ಈ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲಾಗುತ್ತದೆ. ಜೊತೆಗೆ  ಮಾಣಿ  ಕರ್ನಾಟಕ ಪ್ರೌಡ ಶಾಲಾ ರಸ್ತೆ ಅಭಿವೃದ್ದಿಗೆ ರೂ 10 ಲಕ್ಷ ಅನುದಾನ ನೀಡುತ್ತೇನೆ ಎಂದು ಅವರು ಭರವಸೆ ನೀಡಿದರು. 1 ಲಕ್ಷ 70 ಸಾವಿರ ಲಸಿಕೆಯನ್ನು  ತಾಲೂಕಿನಲ್ಲಿ ಈವರೆಗೆ ನೀಡಲಾಗಿದೆ. ಅದರಲ್ಲಿ 60 ವರ್ಷ ಮೇಲ್ಪಟ್ಟ ಸುಮಾರು 90 ಶೇಕಡಾ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಡಿಸೆಂಬರ್ ನೊಳಗೆ ರಾಜ್ಯದ ಪ್ರತಿ ಯೊಬ್ಬ ನಾಗರಿಕನಿಗೆ ಲಸಿಕೆ ನೀಡಲು ಪ್ರಧಾನಿ ನರೇಂದ್ರ ಮೋದಿ ಯವರ ನೇತ್ರತ್ವದಲ್ಲಿ ವ್ಯವಸ್ಥೆ  ಮಾಡಲಾಗುತ್ತಿದೆ ಎಂದು ಅವರು ಭರವಸೆ ನೀಡಿದರು.  ಸಮರ್ಥ ವ್ಯಕ್ತಿಯ ವ್ಯಕ್ತಿತ್ವವನ್ನು ಕಷ್ಟಕಾಲದಲ್ಲಿ ಮಾತ್ರ ಅಳತೆ ಮಾಡಲು ಸಾಧ್ಯ ಅಂತಹ ಸಮರ್ಥ ವ್ಯಕ್ತಿಯ ಸಾಲಿನಲ್ಲಿ ಜಗತ್ತಿನಲ್ಲಿ ಪ್ರಧಾನಿ  ಮೋದಿ ಯವರು ಹೆಸರು ಇದೆ ಎನ್ನುವುದಕ್ಕೆ‌  ಸಂತೋಷ ವಾಗುತ್ತಿದೆ. ಸಮರ್ಥ ವಾಗಿ ಕೋವಿಡ್ ನ್ನು ನಿಭಾಯಿಸಲು ಕೇಂದ್ರ ಸರಕಾರ ಯಶಸ್ವಿಯಾಗಿದೆ ಎಂದು ಅವರು ತಿಳಿಸಿದರು.


   
ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯ ಕ್ರಮದ ಅಧ್ಯಕ್ಷ ತೆ ವಹಿಸಿ ದ್ದರು. ಮಾಣಿ ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ಉಪಾಧ್ಯಕ್ಷ ಮಹಮ್ಮದ್ ಹಬೀಬ್, ಕಾರ್ಯದರ್ಶಿ ಇಬ್ರಾಹಿಂ.ಕೆ.ಮಾಣಿ ಸ್ಕೌಟ್ & ಗೈಡ್ಸ್ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಪ್ರಹ್ಲಾದ ಶೆಟ್ಟಿ ಜಡ್ತಿಲ, ಬಂಟ್ವಾಳ ರೋಟರಿ ಕ್ಲಬ್ ನ ಕಾರ್ಯದರ್ಶಿ ಧನಂಜಯ ಬಾಳಿಗ, ಅಪೋಲೊ ಸ್ಪೆಶಾಲಿಟಿ ಆಸ್ಪತ್ರೆ ಬೆಂಗಳೂರು ಇದರ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ಗಣೇಶ್ ನಾಗರಾಜ್ ಮತ್ತು ಆಯುಷ್, ಮುಖ್ಯೋಪಾಧ್ಯಾಯರಾದ ಬಿ.ಕೆ.ಭಂಡಾರಿ  ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಶಶಿಕಲಾ ಮೊದಲಾದವರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಅತಿಥಿಗಳನ್ನು ಸ್ವಾಗತಿಸಿ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.