ಪುತ್ತೂರಿನಲ್ಲಿ ಅಖಿಲ ಭಾರತೀಯ ಹಿಂದೂ ಮಹಾಸಭಾ ಅಸ್ತಿತ್ವಕ್ಕೆ ಸಿದ್ಧತೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರಿನಲ್ಲಿ ಮುಂದಿನ ದಿನಗಳಲ್ಲಿ ಅಸ್ತಿತ್ವಕ್ಕೆ ಬರಲಿರುವ ಅಖಿಲ ಭಾರತೀಯ ಹಿಂದೂ ಮಹಾಸಭಾ ಪಕ್ಷದ ಕಾರ್ಯಚಟುವಟಿಕೆಗಳಿಗೆ ಪುತ್ತೂರಿನಲ್ಲಿ ಆರಂಭಿಸುವ ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರು ಆ.4ರಂದು ಪುತ್ತೂರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದ್ದಾರೆ.

ರಾಜಕೀಯವನ್ನು ಹಿಂದುತ್ವಗೊಳಿಸಿ, ಹಿಂದುಗಳನ್ನು ಸೈನಿಕೀಕರಣಗೊಳಿಸಿ ಎಂಬ ಘೋಷ ವ್ಯಾಕ್ಯದೊಂದಿಗೆ ಪಕ್ಷ ಮುನ್ನಡೆಯಲಿದೆ ಎಂದು ರಾಜ್ಯಾಧ್ಯಕ್ಷ ಪವಿತ್ರನ್ ಅವರು ತಿಳಿಸಿದ್ದು, ಅವರ ಜೊತೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರು ಕೂಡಾ ಜೊತೆಗಿದ್ದರು. ಪುತ್ತೂರು ಪರ್ಲಡ್ಕದಲ್ಲಿರುವ ಧನ್ಯ ಕುಮಾರ್ ಬೆಳಂದೂರು ಅವರ ಕಚೇರಿಯಲ್ಲಿ ಸ್ನೇಹಿತರನ್ನು ಭೇಟಿ ಮಾಡಿದ ಪವಿತ್ರನ್ ಅವರು ಪುತ್ತೂರಿನಲ್ಲಿ ಮುಂದಿನ ತಿಂಗಳು ಪಕ್ಷದ ಕಾರ್ಯಚಟುವಟಿಕೆ ನಡೆಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಧನ್ಯ ಕುಮಾರ್ ಬೆಳಂದೂರು, ನವೀನ್ ಕುಲಾಲ್, ರಾಜೇಶ್ ಕೌಡಿಚ್ಚಾರ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.