HomePage_Banner
HomePage_Banner
HomePage_Banner
HomePage_Banner

ಹಾಸನದಲ್ಲಿ ರಾಜ್ಯ ಕಾರ್‍ಯನಿರತ ಪತ್ರಕರ್ತರ ಸಂಘದಿಂದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಅಭಿನಂದನಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ದ.ಕ. ಜಿಲ್ಲಾ ವ್ಯಾಪ್ತಿಯ 68 ಪತ್ರಕರ್ತರು ಭಾಗಿ
  •  ಮಾಧ್ಯಮ ಅಕಾಡೆಮಿ ಸದಸ್ಯರಿಗೆ ಸನ್ಮಾನ

ಉಪ್ಪಿನಂಗಡಿ: ೩೫ನೇ ಪತ್ರಕರ್ತರ ರಾಜ್ಯ ಸಮ್ಮೇಳನವನ್ನು ಮಂಗಳೂರಿನಲ್ಲಿ ಯಶಸ್ವಿಯಾಗಿ ನಡೆಸಿಕೊಟ್ಟ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಹಾಸನದಲ್ಲಿ ಅಭಿನಂದನಾ ಕಾರ್ಯಕ್ರಮ ಆ. ೩ರಂದು ನಡೆಯಿತು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಸನದ ಹೊಳೆನರಸೀಪುರ ರಸ್ತೆಯಲ್ಲಿರುವ ನಂದಗೋಕುಲ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಅಭಿನಂದನಾ ಸಮಾರಂಭವನ್ನು ಹಾಸನ ಜಿಲ್ಲಾಧಿಕಾರಿ ಗಿರೀಶ್ ಉದ್ಘಾಟಿಸಿದರು.

ಹಾಸನ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶ್ರೀನಿವಾಸ ಗೌಡ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಪದಾಧಿಕಾರಿಗಳನ್ನು ಹಾಗೂ ಯಶಸ್ವಿ ಸಮ್ಮೇಳನದ ವಿವಿಧ ಸಮಿತಿಯ ಪದಾಧಿಕಾರಿಗಳನ್ನು ಅಭಿನಂದಿಸಿದರು.

ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಆರ್. ಪ್ರಸನ್ನ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಹಾಸನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಎ. ಪರಮೇಶ್ ಮತ್ತು ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ ದ.ಕ. ಜಿಲ್ಲಾ ಕಾರ್‍ಯನಿರತ ಪತ್ರಕರ್ತರ ಸಂಘದ ವಿಶೇಷ ಕಾರ್‍ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಧ್ಯಮ ಅಕಾಡೆಮಿ ಸದಸ್ಯರಿಗೆ ಸನ್ಮಾನ:
ಇದೇ ಸಂದರ್ಭದಲ್ಲಿ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿರುವ ಟಿ.ವಿ. ಶಿವಾನಂದ ತಗಡೂರು, ಜಗನ್ನಾಥ ಶೆಟ್ಟಿ ಬಾಳ ಮತ್ತು ರವಿ ನಾಕಲಗೂಡು ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ರಾಜ್ಯ ಪತ್ರಕರ್ತರ ಭವನ ಸಮಿತಿ ಸದಸ್ಯ ಹೆಚ್.ಬಿ. ಮದನಗೌಡ, ರಾಜ್ಯ, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಜೆ.ಆರ್. ಕೆಂಚೇಗೌಡ, ಮಂಗಳೂರು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆರ್. ರಾಮಕೃಷ್ಣ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಆರಿಫ್ ಪಡುಬಿದ್ರೆ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ಬಿ.ಎನ್. ಪುಷ್ಪರಾಜ್, ಕಾರ್‍ಯದರ್ಶಿ ಸಿದ್ದಿಕ್ ನೀರಾಜೆ, ಕಾರ್‍ಯಕಾರಿ ಸಮಿತಿ ಸದಸ್ಯರಾದ ಭಾಸ್ಕರ ರೈ ಕಟ್ಟ, ಪುತ್ತೂರು ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣಕುಮಾರ್ ನಾಳ, ಯು.ಎಲ್. ಉದಯ ಕುಮಾರ್, ನಝೀರ್ ಕೊಯಿಲ, ಉಮಪ್ರಸಾದ್‌ ರೈ, ಕಡಬ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ., ಪದಾಧಿಕಾರಿಗಳಾದ ಕೆ.ಎಸ್. ಬಾಲಕೃಷ್ಣ ಗೌಡ, ಅಬ್ದುಲ್ ತಸ್ಲೀಮ್ ಮರ್ದಾಳ, ಪ್ರವೀಣ್ ರಾಜ್ ಕೊಲ, ದಯಾನಂದ ಕಲ್ನಾರು, ಪ್ರವೀಣ್ ಚೆನ್ನಾವರ, ಸುಧಾಕರ ಆಚಾರ್ಯ, ಪ್ರಕಾಶ್ ಕೋಡಿಂಬಾಳ ಸೇರಿದಂತೆ ಜಿಲ್ಲೆಯ ೬೮ ಮಂದಿ ಪತ್ರಕರ್ತರು ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.