HomePage_Banner
HomePage_Banner
HomePage_Banner
HomePage_Banner

ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ದೀಪ ಪ್ರದಾನ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ 2020-21ನೇ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಆ. 31ರಂದು ಜರಗಿತು. ಜ್ಞಾನದ ಸಂಕೇತವಾದ ದೀಪವನ್ನು ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆಯನ್ನು ಮಾಡಲಾಗಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ದೀಪ ಪ್ರದಾನ ಮಾಡುವ ಮೂಲಕ ತಮ್ಮ ಜವಾಬ್ದಾರಿಯನ್ನು ಹಸ್ತಾಂತರಿಸಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಕಾರ್ಯದರ್ಶಿ ಡಾ. ಕೃಷ್ಣ ಭಟ್ ಮಾತನಾಡಿ ತಮ್ಮ ಮೌಲ್ಯಯುತವಾದ ನುಡಿಗಳ ಮೂಲಕ ವಿದ್ಯಾರ್ಥಿಗಳಿಗೆ ಸಂಸ್ಕಾರಯುತವಾದ ಸಮಾಜಮುಖಿ ಕಾರ‍್ಯಗಳಲ್ಲಿ ತೊಡಗಿಸಿ ಕೊಳ್ಳುವಂತೆ ತಿಳಿಸಿದರು. ವಿದ್ಯಾರ್ಥಿಗಳ ಪರವಾಗಿ ಆಶಿಕ ಮತ್ತು ವೈಭವ್ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ವಿದ್ಯಾಲಯದ ಮುಖ್ಯ ಶಿಕ್ಷಕಿ ವೀಣಾ ಆರ್. ಪ್ರಸಾದ್ ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಜೀವನವು ಉಜ್ವಲವಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೀಳ್ಕೊಡಲ್ಪಟ್ಟ ವಿದ್ಯಾರ್ಥಿಗಳು ತಮ್ಮ ನೆನಪಿನ ಕಾಣಿಕೆಯಾಗಿ ಏರ್‌ಕೂಲರ್‌ನ್ನು ವಿದ್ಯಾಲಯಕ್ಕೆ ನೀಡಿದರು.
ವಿದ್ಯಾಲಯದ ಸಹ ಶಿಕ್ಷಕರುಗಳಾದ ಎವ್ಲಿನ್ ಪಾಯಸ್, ಸದಾಶಿವ ಶಿವಗಿರಿ ಕಲ್ಲಡ್ಕ, ಸುಪ್ರೀಯಾ ಡಿ ಹಾಗೂ ವಿಜೇತ್ ವಿದ್ಯಾರ್ಥಿಗಳು ತಮ್ಮೊಂದಿಗೆ ಕಳೆದ ಕ್ಷಣಗಳನ್ನು ಮೆಲುಕು ಹಾಕುವುದರ ಮೂಲಕ ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನವನ್ನು ಹೇಗೆ ರೂಪಿಸಿಕೊಳ್ಳಬೇಕೆಂದು ಕಿವಿ ಮಾತನ್ನು ಹೇಳಿದರು.

ಕಾರ್ಯಕ್ರಮದಲ್ಲಿ ಇಂದ್ರಪ್ರಸ್ಥ ಸಂಸ್ಥೆಯ ಸಂಚಾಲಕ ಯು.ಜಿ. ರಾಧ, ಅಧ್ಯಕ್ಷ ಕರುಣಾಕರ ಸುವರ್ಣ ಹಾಗೂ ವಿದ್ಯಾಲಯದ ಶಿಕ್ಷಕ, ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಅಭಿಷೇಕ್ ಪಿ.ಕೆ. ಸ್ವಾಗತಿಸಿ, ವಿನೀತ್ ವಂದಿಸಿದರು. ವಿದ್ಯಾರ್ಥಿನಿಯರಾದ ಕುಮಾರಿ ಅನುಷಾ ಮತ್ತು ಕುಮಾರಿ ಸಾನ್ವಿ ಕಾಮತ್ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.