HomePage_Banner
HomePage_Banner
HomePage_Banner
HomePage_Banner

ಕುಂಬ್ರ ಎಸ್‌ಸಿಡಿಸಿಸಿ ಬ್ಯಾಂಕ್‌ನ ಆರ್ಥಿಕ ಸಾಕ್ಷರತ ಕಾರ್ಯಗಾರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕುಂಬ್ರ ಶಾಖೆ ಮತ್ತು ನಬಾರ್ಡ್‌ನ ಸಹಯೋಗದೊಂದಿಗೆ ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮವು ಆ.೩೦ ರಂದು ಕುಂಬ್ರ ಬ್ಯಾಂಕ್ ಶಾಖೆಯಲ್ಲಿ ನಡೆಯಿತು. ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೀವಿ ಎಸ್.ರೈಯವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಸ್‌ಸಿಡಿಸಿಸಿ ಬ್ಯಾಂಕ್ ಶಾಖೆ ಗ್ರಾಹಕರೊಂದಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬಂದಿದ್ದು ಮುಂದೆಯೂ ಈ ಶಾಖೆಯಿಂದ ಇನ್ನಷ್ಟು ಸೇವೆ ದೊರಕುವಂತಾಗಲಿ ಎಂದು ಶುಭ ಹಾರೈಸಿದರು. ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿವೃತ್ತ ಹಿರಿಯ ಶಾಖಾ ವ್ಯವಸ್ಥಾಪಕರಾದ ನರಸಿಂಹ ಪೂಂಜಾ ಅಧ್ಯಕ್ಷತೆ ವಹಿಸಿ ಶಾಖೆಯ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧಿಕಾರಿ ಸಂತೋಷ್ ಕುಮಾರ್‌ರವರು ಸಾಲ ಪಡೆಯುವುದು ಮತ್ತು ಅದನ್ನು ಮರುಪಾವತಿಸುವ ಬಗ್ಗೆಯೂ ಚಿಂತನೆ ಮಾಡಬೇಕು ಎಂದರು ಇದಲ್ಲದೆ ವಿವಿಧ ವಿಮಾ ಯೋಜನೆಗಳ ಬಗ್ಗೆಯೂ ತಿಳಿಸಿದರು. ಹಣಕಾಸಿನ ವಿಚಾರದಲ್ಲಿ ಯಾರೂ ಲೆಕ್ಕಚಾರವಿಲ್ಲದೆ ವ್ಯವಹರಿಸಬಾರದು ತಮ್ಮ ಉಳಿತಾಯವನ್ನು ಗಮನದಲ್ಲಿಟ್ಟುಕೊಂಡು ವ್ಯವಹಾರ ನಡೆಸಬೇಕು ಎಂದು ಅವರು ಹೇಳಿದರು.

ಗ್ರಾಹಕರ ಪರವಾಗಿ ಚಂದನ ಕಾಂಪ್ಲೆಕ್ಸ್ ಮಾಲಕ ರಾಮಮೋಹನ್ ಪಿ.ಎಸ್‌ರವರು ಬ್ಯಾಂಕ್ ಹಾಗೂ ಬ್ಯಾಂಕ್ ಸಿಬ್ಬಂದಿಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಶಾಖಾ ವ್ಯವಸ್ಥಾಪಕ ಹರೀಶ್ ಪಿ.ರೈಯವರು ಪ್ರಾಸ್ತಾವಿಕವಾಗಿ ಮಾತನಾಡಿ, ಬ್ಯಾಂಕ್‌ನ ಪ್ರಗತಿಯ ಬಗ್ಗೆ ತಿಳಿಸಿ ಗ್ರಾಹಕರ ಸಹಕಾರ ಕೋರಿದರು. ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಕುಮಾರ್ ರೈ, ಎಸ್‌ಸಿಡಿಸಿಸಿ ಬ್ಯಾಂಕ್‌ನ ವಲಯ ಮೇಲ್ವಿಚಾರಕ ಶರತ್ ಡಿ ಸಂದರ್ಭೋಚಿತವಾಗಿ ಮಾತನಾಡಿದರು. ಪದ್ಮನಾಭ ಆಚಾರ್ಯ ಪ್ರಾರ್ಥಿಸಿದರು. ಸಿಬ್ಬಂದಿ ರೋಹಿಣಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರೋಹಿತ್ ಕುಮಾರ್ ಎಂ.ಪಿ ವಂದಿಸಿದರು. ಸಿಬ್ಬಂದಿಗಳಾದ ರಮೇಶ್ ಬಿ, ಅನಿಲ್ ಕುಮಾರ್ ರೈ, ಎಸ್.ಎಚ್.ಜಿ ಪ್ರೇರಕಿ ಹರಿಣಾಕ್ಷಿ ಡಿ.ಜಿ ಸಹಕರಿಸಿದ್ದರು.

ಪ್ರಿಯೇಶ್‌ರವರಿಗೆ ವಾಹನ ಸಾಲದ ಡಿ.ಡಿಯನ್ನು ಹಸ್ತಾಂತರಿಸಲಾಯಿತು. ಹೊಸ ನವೋದಯ ಸ್ವಸಹಾಯ ಗುಂಪಿನ ಸದಸ್ಯರಿಗೆ ನಿರ್ಣಯ ಪುಸ್ತಕ, ಸಾಲ ಮಂಜೂರಾತಿ ಪತ್ರ ನೀಡಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.