HomePage_Banner
HomePage_Banner
HomePage_Banner
HomePage_Banner

ನಗರಸಭೆ ನೇತೃತ್ವದಲ್ಲಿ ಪುರಭವನದಲ್ಲಿ ಕೋವಿಡ್ ಲಸಿಕೆ ಮೇಳ 1 ತಿಂಗಳಲ್ಲಿ ಶೇ.100 ಲಸಿಕೆ ಗುರಿ ಸಾಧನೆ -ಸಂಜೀವ ಮಠಂದೂರು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಜಗತ್ತಿನಲ್ಲಿ ಭಾರತದಲ್ಲಿ ಮಾತ್ರ ಅತೀ ದೊಡ್ಡ ಲಸಿಕೆ ಅಭಿಯಾನ ನಡೆಯುತ್ತಿದೆ. ದೇಶದ 135 ಕೋಟಿ ಜನರಿಗೆ ಉಚಿತ ಲಸಿಕೆ ನೀಡಲಾಗುತ್ತಿದ್ದು, ಈಗಾಗಲೇ 65 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲೂ ಇವತ್ತು 11ಸಾವಿರ ಲಸಿಕೆ ವಿತರಣೆ ನಡೆಯುತ್ತಿದೆ. ಮುಂದಿನ ಒಂದು ತಿಂಗಳಲ್ಲಿ ಶೇ.100 ಲಸಿಕೆ ಗುರಿ ಸಾಧಿಸಿ ಲಸಿಕೆಯುಕ್ತ ಪುತ್ತೂರು ಆಗಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಸೆ.1ರಂದು ನಡೆಯುತ್ತಿರುವ ಲಸಿಕೆ ವಿತರಣೆಗೆ ಸಂಬಂಧಿಸಿ ನಗರಸಭೆ ನೇತೃತ್ವದಲ್ಲಿ ಪುತ್ತೂರು ಪುರಭವನದಲ್ಲಿ 2ಸಾವಿರ ಲಸಿಕೆ ಮೇಳವನ್ನು ಪರಿಶೀಲಿಸಿದ ಅವರು ಪತ್ರಿಕಾ ಮಾದ್ಯಮದೊಂದಿಗೆ ಮಾತನಾಡಿದರು. ಸಾಮಾನ್ಯ ಜನರು ಕೂಡಾ ಕೋವಿಡ್‌ನಿಂದ ರಕ್ಷಣೆ ಪಡೆಯಬೇಕು ಎಂದು ಲಸಿಕೆ ಅಭಿಯಾನ ನಡೆಯುತ್ತಿದೆ. ಪುರಭವನದಲ್ಲಿ ಲಸಿಕೆ ಮಹಾಮೇಳ ಮಾಡಿದ್ದೇವೆ. ಇಲ್ಲಿ ಯಾರು ಕಾಯಬೇಕಾಗಿಲ್ಲ. ಪುತ್ತೂರು ಲಸಿಕೆಯುಕ್ತ ಆಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಕೆ. ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಗೌರಿ, ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.