HomePage_Banner
HomePage_Banner
HomePage_Banner
HomePage_Banner

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಪುಸ್ತಕ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಕೋವಿಡ್ ನಿಯಮಾನುಸಾರ ಸರಳವಾಗಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರರವರು ವಹಿಸಿದ್ದು ಕೃಷ್ಣನ ಜೀವನವು ನಮಗೆ ಆದರ್ಶವಾಗಿದ್ದು ಅದನ್ನು ನಮ್ಮ ಶಿಕ್ಷಣದಲ್ಲಿ ಅಳವಡಿಸಿಕೊಂಡಾಗ ಪಾಲಿಸಿದಾಗ ಉತ್ತಮ ನಾಗರೀಕನಾಗಲು ಸಾಧ್ಯ ಎಂದು ತಿಳಿಸುತ್ತಾ ಶುಭ ಕೋರಿದರು. ಮುಖ್ಯ ಅತಿಥಿಗಳಾಗಿ ಗೋಪಾಲ ಕೃಷ್ಣ ಕಡಂಬಳಿತ್ತಾಯ ಹಾಗೂ ಜಯರಾಜ್ ಆಚಾರ್ ಕಳತ್ತಜೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಭಾಸ್ಕರ ಆಚಾರ್ ಹಿಂದಾರು, ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ, ಸದಸ್ಯರಾದ ಪ್ರಸನ್ನ ಭಟ್, ಎಸ್.ಜಿ.ಕೃಷ್ಣ, ಹರೀಶ್ ಪುತ್ತೂರಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎಸ್.ಜಿ.ಕೃಷ್ಣರವರು ಬರೆದಿರುವ ಶ್ರೀ ಗೋಪಾಲಕೃಷ್ಣ ಕಡಂಬಳಿತ್ತಾಯರವರ ಜೀವನ ಚರಿತ್ರೆ ಪುಸ್ತಕವನ್ನು ಶಾಲಾ ಅಧ್ಯಕ್ಷರು ಈ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಜಯಮಾಲ .ವಿ.ಎನ್ ಸ್ವಾಗತಿಸಿ, ಶಿಕ್ಷಕಿ ಪ್ರಮೀಳ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಾಂಕೇತಿಕವಾಗಿ ಮೊಸರು ಕುಡಿಕೆ ಉತ್ಸವ, ಸಿಹಿ ತಿಂಡಿ ವಿತರಣೆ ನಡೆಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.