HomePage_Banner
HomePage_Banner
HomePage_Banner
HomePage_Banner

ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಟ್ಟಂಪಾಡಿ ಫಿಟ್ ಇಂಡಿಯಾ ಫ್ರೀಡಮ್ ರನ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಬೆಟ್ಟಂಪಾಡಿ: ವಿದ್ಯಾರ್ಥಿಗಳು ವಿಷಯ ಸಂಬಂಧಿತ ಜ್ಞಾನಾರ್ಜನೆಯ ಜೊತೆಗೆ ತಮ್ಮ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡಾ ಚಟುವಟಿಕೆಗಳು ಅತ್ಯವಶ್ಯಕ. ಮಾನ್ಯ ಪ್ರಧಾನಮಂತ್ರಿಯವರು ಕಾರ್ಯಗತಗೊಳಿಸಿದ ’ಫಿಟ್ ಇಂಡಿಯಾ ಪ್ರೀಡಮ್ ರನ್’ ಪ್ರಸ್ತುತ ದಿನಗಳಲ್ಲಿ ಈ ಪರಿಕಲ್ಪನೆಯನ್ನು ಅಳವಡಿಸಿಕೊಳ್ಳುವುದು ತುಂಬ ಅತ್ಯಾಗತ್ಯ. ಇದು ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಅಧ್ಯಾಪಕರುಗಳು ಕೂಡ ದೈಹಿಕ ಸಾಮರ್ಥ್ಯದ ಕಡೆಗೆ ಗಮನ ಕೊಟ್ಟು ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕಾಗಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಟ್ಟಂಪಾಡಿಯ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ ಹೇಳಿದರು. ಇವರು ಕಾಲೇಜಿನ ಐಕ್ಯೂಎಸಿ ಮತ್ತು ದೈಹಿಕ ಶಿಕ್ಷಣ ವಿಭಾಗ ಆಯೋಜಿಸಿದ ’ಫಿಟ್ ಇಂಡಿಯಾ ಫ್ರೀಡಮ್ ರನ್’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಪೊಡಿಯ ಫಿಟ್ ಇಂಡಿಯಾ ಫ್ರೀಡಮ್ ರನ್‌ನ ಮಹತ್ವದ ಬಗ್ಗೆ ಹೇಳಿದರು. ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ರಾಷ್ಟ್ರದಾದ್ಯಂತ ಜಾರಿಗೊಂಡಿರುವ ಫಿಟ್ ಇಂಡಿಯಾ ಫ್ರೀಡಮ್ ರನ್ ಜನರಲ್ಲಿ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ. ಊರಿನಲ್ಲಿ ಹತ್ತು ಆಸ್ಪತ್ರೆಗಳನ್ನು ಕಟ್ಟುವ ಬದಲು ಒಂದು ಕ್ರೀಡಾಂಗಣವನ್ನು ನಿರ್ಮಿಸಿ ಎಂದು ತಜ್ಞರ ಮಾತನ್ನು ಉಲ್ಲೇಖಿಸಿದರು.

ಕಾಲೇಜಿನ ಮೈದಾನದಲ್ಲಿ ಜರುಗಿದ ಈ ಕಾರ್ಯಕ್ರಮದ ಎರಡನೆಯ ಭಾಗವಾಗಿ ಉಪನ್ಯಾಸಕರು ಮತ್ತು ವಿದ್ಯಾರ್ಥಿವೃಂದದವರು ನಡಿಗೆ ಮತ್ತು ಓಟದಲ್ಲಿ ತೊಡಗಿಸಿಕೊಂಡರು. ವಿದ್ಯಾರ್ಥಿಗಳು, ಉಪನ್ಯಾಸಕ ವೃಂದ ಮತ್ತು ಉಪನ್ಯಾಸಕೇತರ ವೃಂದ ಕಾರ್ಯಕ್ರಮದಲ್ಲಿ ಹಾಜರಿದ್ದರು. ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಶಶಿಕುಮಾರ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.