HomePage_Banner
HomePage_Banner
HomePage_Banner
HomePage_Banner

ಕಳೆದ ವರ್ಷದ ನಿಯಮದಂತೆ ಈ ಬಾರಿಯೂ ಗಣೇಶೋತ್ಸವ ಆಚರಣೆಗೆ ಅವಕಾಶ-ಸಿ.ಎಂ.

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಬೆಂಗಳೂರು: ಕಳೆದ ವರ್ಷ ನೀಡಲಾಗಿದ್ದ ನಿಯಮದಂತೆ ಈ ಬಾರಿಯೂ ಗಣೇಶ ಹಬ್ಬಾಚರಣೆಗೆ ಅನುಮತಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗಣೇಶೋತ್ಸವ ಆಚರಣೆ ಕುರಿತು ಈಗಾಗಲೇ ಹೇಳಿದಂತೆ ಸೆ.5ರಂದು ತಜ್ಞರು ವರದಿ ಸಲ್ಲಿಸುತ್ತಾರೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ವಿಭಿನ್ನವಾಗಿ ಹಬ್ಬ ಆಚರಿಸಲಾಗುತ್ತದೆ. ತಜ್ಞರು ಸಹ ಆಯಾ ಜಿಲ್ಲೆಯಲ್ಲಿ ವರದಿ ಸಲ್ಲಿಸಲು ಕಾಲಾವಕಾಶ ಕೇಳಿದ್ದಾರೆ.ಕಳೆದ ವರ್ಷ ಯಾವ ರೀತಿ ನಿಯಮಾನುಸಾರ ಗಣೇಶೋತ್ಸವ ಆಚರಿಸಲಾಗಿತ್ತೋ ಅದೇ ರೀತಿ ಈ ವರ್ಷ ಕೂಡಾ ಕಟ್ಟುನಿಟ್ಟಿನ ಕ್ರಮಗಳ ಮೂಲಕ ಆಚರಿಸಲು ಅನುಮತಿ ನೀಡಲಾಗುತ್ತದೆ.ಈಗಾಗಲೇ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ತೆಗೆಯಲಾಗಿದೆ.ಆರ್ಥಿಕ ಚಟುವಟಿಕೆಯಷ್ಟೇ ಕೋವಿಡ್ ನಿರ್ವಹಣೆ ಕೂಡ ಮುಖ್ಯವಾಗಿದೆ.ಹೀಗಾಗಿ ಎಲ್ಲಿ ಕೊರೋನಾ ಕಡಿಮೆಯಿರುತ್ತದೊ ಅಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದವರು ಹೇಳಿದ್ದಾರೆ.ಕೋವಿಡ್ ಪರಿಸ್ಥಿತಿ ಬಗ್ಗೆ ವರದಿ ನೀಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಅವರು ನೀಡುವ ವರದಿಯನ್ನು ತಜ್ಞರ ತಂಡ ಪರಿಶೀಲನೆ ನಡೆಸಿದ ಬಳಿಕ ಗಣೇಶೋತ್ಸವ ಆಚರಣೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

ಗಣೇಶೋತ್ಸವಕ್ಕೆ ಅವಕಾಶ-ಬಹುತೇಕರ ಒತ್ತಾಯ:
ಹಿಂದೂ ಸಂಘಟನೆಗಳ ಭಾವನೆಯನ್ನು ಅರ್ಥ ಮಾಡಿಕೊಂಡು ಗಣೇಶ ಹಬ್ಬ ನಡೆಸಲು ಸರಕಾರ ಅನುಮತಿ ನೀಡುವ ಸಾಧ್ಯತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.ಗಣೇಶೋತ್ಸವ ಆಚರಿಸಲು ಅವಕಾಶ ನೀಡಬೇಕು ಎಂಬುದು ಬಹುತೇಕರ ಒತ್ತಾಯವಾಗಿದೆ.ಅವರ ಭಾವನೆಗಳಿಗೆ ಬೆಲೆ ನೀಡುವುದು ಸರ್ಕಾರದ ಕರ್ತವ್ಯ.ಆದ್ದರಿಂದ ಅನುಮತಿ ನೀಡಲಾಗುವುದು. ಹಬ್ಬದ ಆಚರಣೆ ಹೇಗಿರಬೇಕು, ಎಷ್ಟು ಜನ ಭಾಗವಹಿಸಬೇಕು, ವಿಧಿಸಬೇಕಾದ ನಿರ್ಬಂಧಗಳ ಬಗ್ಗೆ ಮುಖ್ಯಮಂತ್ರಿಯವರು ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನಿಸಲಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.