HomePage_Banner
HomePage_Banner
HomePage_Banner
HomePage_Banner

ಕಡಬ: ಹಳೆಸ್ಟೇಶನ್‌ನಲ್ಲಿರುವ ಅಪಾಯಕಾರಿ ಮರ ತೆರವಿಗೆ ಆಗ್ರಹ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಇಲ್ಲಿನ ಹಳೆಸ್ಟೇಶನ್‌ನಲ್ಲಿ ಗ್ರಾ.ಪಂ. ಬಸ್ ತಂಗುದಾಣದ ಬಳಿ ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿರುವ ಅಪಾಯಕಾರಿ ಮರವನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಪಂಚಾಯತ್‌ಗೆ ಮನವಿ ಸಲ್ಲಿಸಿದ್ದಾರೆ.

ಮುಖ್ಯ ರಸ್ತೆಯತ್ತ ಬಾಗಿರುವ ಈ ಬೃಹತ್ ಮರದ ಕೊಂಬೆಗಳ ಕೆಳಭಾಗದಲ್ಲಿ 33 ಕೆವಿಎ ಹಾಗೂ 11 ಕೆವಿಎ ವಿದ್ಯುತ್ ಲೈನು ಹಾದುಹೋಗುತ್ತಿರುವುದರಿಂದ ಮರ ಮುರಿದುಬಿದ್ದರೆ ವಿದ್ಯುತ್ ತಂತಿ ತುಂಡಾಗಿ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಹಾಗೂ ಸಾರ್ವಜನಿಕರಿಗೂ ಅಪಾಯ ಸಂಭವಿಸುವ ಸಾಧ್ಯತೆಗಳಿವೆ. ಮಾತ್ರವಲ್ಲದೇ ಹತ್ತಿರದಲ್ಲಿಯೇ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಇದ್ದು, ಶಾಲಾ ಮಕ್ಕಳು ಕೂಡ ಇದೇ ದಾರಿಯಲ್ಲಿ ಸಂಚರಿಸುತ್ತಿರುತ್ತಾರೆ. ಈ ಎಲ್ಲಾ ವಿಚಾರಗಳನ್ನು ಮುಂದಿರಿಸಿಕೊಂಡು ಈ ಹಿಂದೆಯೂ ಹಲವಾರು ಬಾರಿ ಅರಣ್ಯ ಇಲಾಖೆ ಹಾಗೂ ಕಡಬ ಗ್ರಾ.ಪಂಗೆ ಸಾರ್ವಜನಿಕರು ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಅಪಾಯ ಸಂಭವಿಸುವ ಮೊದಲು ಅಪಾಯಕಾರಿ ಮರವನ್ನು ತೆರವುಗೊಳಿಸಬೇಕೆನ್ನುವುದು ಸ್ಥಳೀಯರ ಆಗ್ರಹವಾಗಿದೆ.

ಕಡಬ: ಅಪಾಯಕಾರಿ ಮರದ ಕೆಳಭಾಗದಿಂದ ಹಾದುಹೋಗುತ್ತಿರುವ ವಿದ್ಯುತ್ ತಂತಿಗಳು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.