HomePage_Banner
HomePage_Banner
HomePage_Banner
HomePage_Banner

ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ – ನಿವೃತ್ತ ಶಿಕ್ಷಕರಿಗೆ ಸನ್ಮಾನ, ಸಾಧಕರಿಗೆ ಅಭಿನಂದನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ದಿನಾಚರಣಾ ಸಮಿತಿ, ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇದರ ಆಶ್ರಯದಲ್ಲಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ದಿನಾಚರಣೆಯ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಸೆ.5ರಂದು ಪುತ್ತೂರು ಪುರಭವನದಲ್ಲಿ ನಡೆಯಿತು.

ಶಾಸಕ ಸಂಜೀವ ಮಠಂದೂರು ಅವರು ಡಾ|ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಸ್ವಾಮಿ ವಿವೇಕಾನಂದ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಬಳಿಕ ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ 48ಮಂದಿ ಶಿಕ್ಷಕರನ್ನು ಗೌರವಿಸಲಾಯಿತು. ಸಾಧಕರನ್ನು ಅಭಿನಂದಿಸಲಾಯಿತು‌.

ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಗೌರಿ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್, ಪೌರಾಯುಕ್ತ ಮಧು ಎಸ್ ಮನೋಹರ್, ಶಿಕ್ಷಕರ ದಿನಾಚರಣಾ ಸಮಿತಿ ಅಧ್ಯಕ್ಷ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ತಾಲೂಕು ಆರೋಗ್ಯ ಅಧಿಕಾರಿ ಡಾ.ದೀಪಕ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹೋಬಲೇಶ್, ಸುನಿತಾ, ವಾಣಿಶ್ರೀ, ಸಿನಿ ಕೆಪಿ, ವಿಜಯ ಪ್ರಭು, ಲಿಂಗಮ್ಮ ನಾಡಗೀತೆ ಮತ್ತು ರೈತಗೀತೆ ಹಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ ಲೋಕೇಶ್ ಸ್ವಾಗತಿಸಿದರು. ಪ್ರಶಾಂತ್ ಅನಂತಾಡಿ ಮತ್ತು ತೇಜಸ್ವಿ ಅಂಬೆಕಲ್ಲು ಕಾರ್ಯಕ್ರಮ ನಿರೂಪಿಸಿದರು.

ಕಿರುಚಿತ್ರ ಬಿಡುಗಡೆ:
ಹೇಮ ಜಯರಾಮ್ ಅವರ ಪ್ರಸ್ತುತಿಯಲ್ಲಿ ರೂಪಿತಗೊಂಡ ಕಿರುಚಿತ್ರದ ಬಿಡುಗಡೆ ಕಾರ್ಯಕ್ರಮವನ್ನು ಶಾಸಕ ಸಂಜೀವ ಮಠಂದೂರು ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸುದ್ದಿ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಪಿ.ಶಿವಾನಂದ, ಕಹಳೆ ನ್ಯೂಸ್ ನ ಶ್ಯಾಮ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

ಎಸ್ ಎಸ್ ಎಲ್ ಸಿಯಲ್ಲಿ ಸಾಧಕರಿಗೆ ಸನ್ಮಾನ:
ಎಸ್ ಎಸ್ ಎಲ್ ಸಿಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಶ್ರೀಶ ಶರ್ಮ ಮತ್ತು ತನಿಶಾ ರೈ ಅವರನ್ನು ಗೌರವಿಸಲಾಯಿತು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.