HomePage_Banner
HomePage_Banner
HomePage_Banner
HomePage_Banner

ಸಮಾಜದ ಹಿತವನ್ನು ಕಾಪಾಡುವ ನಮ್ಮ ಕಾರ್ಯಕರ್ತರು ಇತರರಿಗಿಂತ ಒಂದು ಹೆಜ್ಜೆ ಮುಂದು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಬಿಜೆಪಿ ನಗರ ಮಂಡಲದಿಂದ ಆರೋಗ್ಯ ಸ್ವಯಂಸೇವಕರ ಅಭಿಯಾನದಲ್ಲಿ ಸಂಜೀವ ಮಠಂದೂರು

ಪುತ್ತೂರು: ಬಿಜೆಪಿಯ ಸ್ವಯಂ ಸೇವಕರು ದೇಶದ 135 ಕೋಟಿ ಜನರಿಗೆ ಆರೋಗ್ಯ ಮತ್ತು ಪ್ರಾಣ ರಕ್ಷಣೆಯನ್ನು ಮಾಡುವ ಕೆಲಸವನ್ನು ಕೋವಿಡ್ ಸಂದರ್ಭದಲ್ಲಿ ಮಾಡಿದ್ದೇವೆ.

ವ್ಯಕ್ತಿಯ ಅಂತರಾಳದಲ್ಲಿ ಬಾಂಧವ್ಯ, ಸೌಹಾರ್ದತೆ, ವಿಶ್ವಾಸ ಕಲ್ಪಿಸುವ ಕೆಲಸ ಬಿಜೆಪಿಯಿಂದ ಆಗಿದೆ. ರಾಜಕೀಯವನ್ನು ಬದಿಗಿಟ್ಟು ಸಮಾಜದ ಹಿತವನ್ನು ಕಾಪಾಡುವಲ್ಲಿ ನಮ್ಮ ಕಾರ್ಯಕರ್ತರು ಇತರರಿಗಿಂತ ಒಂದು ಹೆಜ್ಜೆ ಮುಂದಿದ್ದಾರೆ ಎಂಬುದಕ್ಕೆ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಉದಾಹರಣೆಯಾಗಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಇಲ್ಲಿನ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಸೆ.5ರಂದು ನಡೆದ ಬಿಜೆಪಿ ನಗರ ಮಂಡಲದಿಂದ ಆರೋಗ್ಯ ಸ್ವಯಂಸೇವಕರ ಅಭಿಯಾನ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಕೋವಿಡ್ ಬಂದಾಗ ಇಡಿ ಜಗತ್ತು ತಲ್ಲಣ ಆಗಿದೆ. ಭಾರತದ ಪ್ರಧಾನಿ ಮೋದಿಯವರು ಜಗತ್ತು ತಲ್ಲಣ ಆದಾಗ ಜನರ ರಕ್ಷಣೆಗೆ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆ ಕಾರ್ಯಕ್ರಮಗಳ ಅನುಷ್ಠಾನ ಕಾರ್ಯಕರ್ತರ ಮೂಲಕ ಆಯಿತು. ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಇವತ್ತು ತಮ್ಮ ಕಾರ್ಯವನ್ನು ಲೆಕ್ಕಿಸದೆ ಸಮಾಜದ ಹಿತಕ್ಕಾಗಿ ತಮ್ಮನ್ನು ತಾವು ಸಮರ್ಪಣೆ ಮಾಡಿದ್ದರಿಂದ ಭಾರತ ಇವತ್ತು ಇತರ ದೇಶಗಳಿಗಿಂತ ಭಿನ್ನವಾಗಿದೆ ಎಂದ ಅವರು ಇದಕ್ಕೆ ಉದಾಹರಣೆಯಾಗಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಅವರು ಓರ್ವ ನಗರಸಭಾ ಸದಸ್ಯರಾಗಿದ್ದರೂ ಸ್ವತಃ ಹಿಂದೆ ಮುಂದೆ ನೋಡದೆ ಸ್ಮಶಾನದಲ್ಲಿ ಪಿಪಿಇ ಕಿಟ್ ಧರಿಸಿ ಅಂತ್ಯಸಂಸ್ಕಾರ ಮಾಡುತ್ತಿದ್ದಾರೆ ಎಂದಾದರೆ ನಮ್ಮಲ್ಲಿ ಸಾಮಾನ್ಯ ಕಾರ್ಯಕರ್ತರು ಕೂಡಾ ಎಲ್ಲದಕ್ಕೂ ಸಿದ್ಧರಾಗಿದ್ದಾರೆ ಎಂದರ್ಥ ಎಂದರು.

ನಮ್ಮ ಆರೋಗ್ಯಕ್ಕಿಂತ ನಮ್ಮ ಪಕ್ಕದ ಮನೆಯವರ ಆರೋಗ್ಯ ಮುಖ್ಯ ಎಂದು ನೋಡಿಕೊಳ್ಳುವ ಪರಿಸ್ಥಿತಿಯಲ್ಲಿದ್ದೇವೆ ಎಂದರು. ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಹ ಸಂಚಾಲಕ ಗಣೇಶ್ ಪ್ರಸಾದ್ ಮುದ್ರಾಜೆ ಆರೋಗ್ಯ ಸ್ವಯಂ ಸೇವಕರ ಅಭಿಯಾನದ ಕುರಿತು ಮರ್ಗಸೂಚಿಗಳನ್ನು ನೀಡಿದರು. ಶಾಸಕ ಸಂಜೀವ ಮಠಂದೂರು ಅವರನ್ನು ಗೌರವಿಸಿದರು. ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್ ಶೆಟ್ಟಿ ಉಪಸ್ಥಿತರಿದ್ದರು. ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಶರವಾತಿ ರವಿನಾರಾಯಣ ಪ್ರಾರ್ಥಿಸಿದರು. ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ ಸ್ವಾಗತಿಸಿದರು. ಬಿಜೆಪಿ ನಗರ ಮಂಡಲದ ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಶಿವಪ್ರಕಾಶ್, ಸಹ ಸಂಚಾಲಕ ನಾಗೇಶ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಅವರು ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.