HomePage_Banner
HomePage_Banner
HomePage_Banner
HomePage_Banner

3 ದಿನದ ಗಣೇಶೋತ್ಸವಕ್ಕೆ ರಾಜ್ಯ ಸರಕಾರದ ಷರತ್ತು ಬದ್ಧ ಅನುಮತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • 3 ದಿನ ಮಾತ್ರ ಗಣೇಶೋತ್ಸವಕ್ಕೆ ಅವಕಾಶ
  • ಸಾಂಸ್ಕೃತಿಕ ಮತ್ತು ಮನರಂಜನಾ ಕಾರ್ಯಕ್ರಮಗಳಿಗೆ ನಿರ್ಬಂಧ
  • ಗಣೇಶಮೂರ್ತಿ ಪೂಜೆಗೆ ಮಾತ್ರ ಅವಕಾಶ
  • ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆಗೆ ನಿಷೇಧ

ಪುತ್ತೂರು: ಸಾರ್ವಜನಿಕವಾಗಿ ಗಣೇಶೋತ್ಸವವನ್ನು ಆಚರಿಸಲು ರಾಜ್ಯಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ, ಸಾರ್ವಜನಿಕವಾಗಿ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಬಂಧ ಹೇರಲಾಗಿದ್ದು, ಸರಳ ಹಾಗೂ ಸಾಂಪ್ರದಾಯಿಕವಾಗಿ ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ ಆದೇಶಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸೆ.5ರಂದು ನಡೆದ ಸಚಿವರು ಹಾಗೂ ತಜ್ಞರ ಸಭೆಯಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡುವ ತೀರ್ಮಾನ ಕೈಗೊಳ್ಳಲಾಯಿತು.

ಸಾರ್ವಜನಿಕ ಗಣೇಶೋತ್ಸವವನ್ನು ಸರಳವಾಗಿ ಆಚರಿಸಬೇಕು. ಅದ್ಧೂರಿ ಆಚರಣೆಗೆ ಅವಕಾಶವಿಲ್ಲ, ಯಾವುದೇ ಸಾಂಸ್ಕೃತಿಕ ಹಾಗೂ ಯಾವುದೇ ರೀತಿಯ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ, ಹೆಚ್ಚು ಗದ್ದಲಕ್ಕೆ ಅವಕಾಶವಿಲ್ಲದಂತೆ ಸರಳ ಹಾಗೂ ಸಾಂಪ್ರದಾಯಿಕವಾಗಿ ಗಣೇಶ ಪೂಜೆಗೆ ಮಾತ್ರ ಅವಕಾಶ ನೀಡುವ ಷರತ್ತುಗಳನ್ನೂ ವಿಧಿಸಲು ತೀರ್ಮಾನ ಮಾಡಲಾಗಿದೆ.

ಗಣೇಶ ಮೂರ್ತಿಯ ವಿಸರ್ಜನೆ ಸಂದರ್ಭದಲ್ಲೂ ಮೆರವಣಿಗೆ, ಉತ್ಸವ ಮಾಡುವುದಕ್ಕೂ ನಿರ್ಬಂಧ ವಿಧಿಸುವ ಜತೆಗೆ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು. ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ದೇವಸ್ಥಾನಗಳಲ್ಲೂ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅವಕಾಶವಿದ್ದು, ಇಲ್ಲೂ ಕೊರೊನಾ ನಿಯಮಗಳ ಕಟ್ಟುನಿಟ್ಟಿನ ಪಾಲನೆಗೂ ಸೂಚನೆ ನೀಡಲಾಗಿದೆ. ಗಣೇಶನ ದರ್ಶನಕ್ಕೆ ಬರುವ ಭಕ್ತರು ಮಾಸ್ಕ್ ಕಡ್ಡಾಯ ಹಾಗೆಯೇ ಥರ್ಮಲ್ ಸ್ಕ್ರೀನಿಂಗ್ ಮತ್ತು ಸ್ಯಾನಿಟೈಸ್ ಕಡ್ಡಾಯಗೊಳಿಸಿ ಸರಕಾರ ಆದೇಶಿಸಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.