HomePage_Banner
HomePage_Banner
HomePage_Banner
HomePage_Banner

ಸೆ.7:ತಾ|ಸರಕಾರಿ ನೌಕರರ ಸಂಘದಿಂದ ಸರಕಾರಿ ನೌಕರರಿಗೆ ಕೆ.ಸಿ.ಎಸ್.ಆರ್, ಸಿ.ಸಿ.ಎ ಬಗ್ಗೆ ಮಾಹಿತಿ ಕಾರ್ಯಾಗಾರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ ಪುತ್ತೂರು ತಾಲೂಕು ಶಾಖೆಯ ಆಶ್ರಯದಲ್ಲಿ ಸರಕಾರಿ ನೌಕರರಿಗೆ ಕೆ.ಸಿ.ಎಸ್.ಆರ್(ಕರ್ನಾಟಕ ನಾಗರಿಕ ಸೇವಾ ನಿಯಮ) ಮತ್ತು ಸಿ.ಸಿ.ಎ(ಕರ್ನಾಟಕ ಸಿವಿಲ್ ಸೇವಾ ನಿಯಮ)ಗಳ ಬಗ್ಗೆ ಮಾಹಿತಿ ಕಾರ್ಯಾಗಾರವು ಸೆ. 7ರಂದು ಸರಕಾರಿ ನೌಕರರ ಸಂಘದ ಮೇರಿ ದೇವಾಸಿಯಾ ಸಭಾಂಗಣದಲ್ಲಿ ಜರಗಲಿದೆ.

ಪುತ್ತೂರು ಶಾಸಕರಾದ ಸಂಜೀವ ಮಠಂದೂರುರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಎಚ್‌ರವರು ಭಾಗವಹಿಸಲಿದ್ದಾರೆ. ಸರಕಾರಿ ನೌಕರರ ಸಂಘದ ತಾಲೂಕು ಶಾಖೆಯ ಅಧ್ಯಕ್ಷ ಶಿವಾನಂದ ಆಚಾರ್ಯರವರು ಅಧ್ಯಕ್ಷತೆ ವಹಿಸಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಣ ಇಲಾಖೆ ಮಂಗಳೂರು ಇಲ್ಲಿನ ನಿವೃತ್ತ ಪತ್ರಾಂಕಿತ ವ್ಯವಸ್ಥಾಪಕರಾದ ಉಮೇಶ್ ಆಚಾರ್‌ರವರು ಭಾಗವಹಿಸಲಿದ್ದಾರೆ ಎಂದು ಸರಕಾರಿ ನೌಕರರ ಸಂಘದ ತಾಲೂಕು ಶಾಖೆಯ ರಾಜ್ಯ ಪರಿಷತ್ ಸದಸ್ಯ ಪುರುಷೋತ್ತಮ್ ಬಿ, ಕಾರ್ಯದರ್ಶಿ ಅಬ್ರಹಾಂ ಎಸ್.ಎ, ಕೋಶಾಧಿಕಾರಿ ನಾಗೇಶ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.