HomePage_Banner
HomePage_Banner
HomePage_Banner
HomePage_Banner

ರಾಮಕುಂಜ ಆ.ಮಾ.ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಸಾಂಕೇತಿಕವಾಗಿ ಆಚರಿಸಲಾಯಿತು. ಭಾರತರತ್ನ ಸರ್ವೇಪಲ್ಲಿ ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಸಂಸ್ಥೆಯ ಕಾರ್‍ಯದರ್ಶಿ ಸೇಸಪ್ಪ ರೈಯವರು ದೀಪ ಬೆಳಗಿಸಿ ಪುಷ್ಪಾರ್ಚನೆಗೈದು, ಶಿಕ್ಷಕರ ಕರ್ತವ್ಯ ಹಾಗೂ ಜವಾಬ್ದಾರಿಯ ಬಗ್ಗೆ ಸಂಸ್ಥೆಯ ಶಿಕ್ಷಕರಿಗೆ ಅರಿವು ಮೂಡಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್ ಟಿ ಯವರು ರಾಧಾಕೃಷ್ಣನ್‌ರವರ ತತ್ವಾದರ್ಶ ಹಾಗೂ ಜೀವನ ಮೌಲ್ಯಗಳ ಬಗ್ಗೆ ಸಂದರ್ಭೋಚಿತವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಶಾಲಾ ಮಟ್ಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಾದ ಕಾವ್ಯ ಪಿ(613) ಹಾಗೂ ಲಾವಣ್ಯ ಪಿ ಎಮ್ (601)ರವರನ್ನು ಪೋಷಕರ ಸಮ್ಮುಖದಲ್ಲಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸಹ ಶಿಕ್ಷಕಿ ಸೌಮ್ಯರವರು ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಪ್ರೌಢ ಶಾಲಾ ಮುಖ್ಯಶಿಕ್ಷಕಿ ಗಾಯತ್ರಿ ಯು ಎನ್ ವಂದಿಸಿದರು. ಸಹಶಿಕ್ಷಕಿ ಅಕ್ಷತಾ ಕಾರ್‍ಯಕ್ರಮ ನಿರೂಪಿಸಿಸಿದರು.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.