HomePage_Banner
HomePage_Banner
HomePage_Banner
HomePage_Banner

ಮಾಣಿ ಕರ್ನಾಟಕ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕೊರಗಪ್ಪ ಭಂಡಾರಿಯವರಿಗೆ ಬಂಟ್ವಾಳ ತಾ| ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಶಿಕ್ಷಕಕರ ದಿನಾಚರಣೆ ಪ್ರಯುಕ್ತ ಬಂಟ್ವಾಳ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಮಾಣಿ ಕರ್ನಾಟಕ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕೊರಗಪ್ಪ ಭಂಡಾರಿಯವರು ಆಯ್ಕೆಯಾಗಿದ್ದಾರೆ.
ಸೆ.5ರಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ಬಂಟ್ವಾಳ ತಾ.ಪಂ.ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ. ಜ್ಞಾನೇಶ್, ತಾಲೂಕು ಶಿಕ್ಷಕರ ದಿನಾಚರಣೆ ಅನುಷ್ಠಾನ ಸಮಿತಿ ಅಧ್ಯಕ್ಷ ಜಯರಾಮ, ಬಂಟ್ವಾಳ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮನಾಥ್ ರೈ ಉಪಸ್ಥಿತರಿದ್ದರು.

ಸೇವಾನುಭ: ಕಳೆದ 33 ವರುಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಇವರು, ಕಾಂಚನ ವೆಂಕಟಸುಬ್ರಹ್ಮಣ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ 3 ವರ್ಷ, ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ 10 ವರ್ಷ ಕರ್ತವ್ಯ ನಿರ್ವಹಿಸಿದ್ದಾರೆ. ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಕಳೆದ 20 ವರುಷಗಳಿಂದ ಸೇವೆ ನೀಡುತ್ತಿದ್ದು, 9 ವರುಷಗಳಿಂದ ಮುಖ್ಯ ಶಿಕ್ಷಕರಾಗಿ ಕರ್ತವ್ಯವನ್ನು ಸಲ್ಲಿಸುತ್ತಿದ್ದಾರೆ.

ಪತ್ನಿ ವಿಶಾಲ, ಪುತ್ರ ಅಂಕಿತ್ ಭಂಡಾರಿಯವರೊಂದಿಗೆ ನೆಹರುನಗರದಲ್ಲಿ ವಾಸಿಸುತ್ತಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.