HomePage_Banner
HomePage_Banner
HomePage_Banner
HomePage_Banner

ಸೆ.10:ಫಿಲೋಮಿನಾ ಗಣಪನಿಗೆ 39 ರ ಸಂಭ್ರಮ-ಏಕದಿನದ ಗಣೇಶೋತ್ಸವ – ಸರಕಾರದ ಮಾರ್ಗಸೂಚಿಯಂತೆ ಈ ಬಾರಿ ಕಾರ್ಯಕ್ರಮ  

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದರ್ಬೆ ವಿನಾಯಕ ನಗರದಲ್ಲಿ ಸಂತ ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಹಾಗೂ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಗಣೇಶೋತ್ಸವ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ನಡೆಯುವ ೩೯ನೇ ವರ್ಷದ ಗಣೇಶೋತ್ಸವವು ಕೋವಿಡ್ ಕಟ್ಟುನಿಟ್ಟಿನ ನಿಯಮದೊಂದಿಗೆ ಒಂದು ದಿನದ ಧಾರ್ಮಿಕ ಕಾರ್ಯಕ್ರಮವನ್ನು ಮಾಡುವುದೆಂದು ಪುತ್ತೂರು ವಿನಾಯಕ ನಗರದಲ್ಲಿ ಸೆ.3ರಂದು ನಡೆದ ಟ್ರಸ್ಟಿಗಳ ಸಭೆಯಲ್ಲಿ ನಿರ್ಣಯಿಸಲಾಯಿತು.

ಸೆ.10  ರಂದು ಶುಕ್ರವಾರ ಬೆಳಿಗ್ಗೆ ಶ್ರೀ ಗಣೇಶನ ವಿಗ್ರಹವನ್ನು ಪರ್ಲಡ್ಕದಿಂದ ತಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೀಪ ಬೆಳಗಿಸಿ ಬಳಿಕ ದರ್ಬೆ ವಿನಾಯಕ ಮಂಟಪದಲ್ಲಿ ಶ್ರೀ ಗಣೇಶನ ವಿಗ್ರಹವನ್ನು ಪ್ರತಿಷ್ಟಾಪನೆಗೊಳಿಸಲಾಗುವುದು. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಪ್ರೀತಂ ಪುತ್ತೂರಾಯರವರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಜರಗಲಿರುವುದು. ಪ್ರತಿ ವರ್ಷದಂತೆ ಈ ಬಾರಿ ಫಿಲೋಮಿನಾ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸನ್ಮಾನ ಸಮಾರಂಭ, ಸಾರ್ವಜನಿಕ ಅನ್ನಸಂತರ್ಪಣೆ, ಸಾಂಸ್ಕೃತಿಕ ಸಮಾರಂಭ ಕೋವಿಡ್ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಕೇವಲ ಧಾರ್ಮಿಕ ವಿಧಿ ವಿಧಾನಗಳಿಗೆ ತೊಂದರೆ ಬಾರದಂತೆ ಕಾರ್ಯಕ್ರಮ ನಡೆಸಲಾಗುವುದು.

ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಆಗಮಿಸಬೇಕು ಹಾಗೂ ಈ ಎಲ್ಲಾ ಧಾರ್ಮಿಕ ಕಾರ್ಯಕ್ಕೆ ಪುತ್ತೂರು ನಾಗರಿಕರು ಪ್ರತಿ ವರ್ಷ ನೀಡುತ್ತಿರುವ ಸಹಕಾರವನ್ನು ನೀಡಿ ಸಹಕರಿಸಬೇಕಾಗಿ ಸಂತ ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಅಧ್ಯಕ್ಷರಾದ ಪ್ರಕಾಶ್ ಮುಕ್ರಂಪಾಡಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

  • ಬೆಳಿಗ್ಗೆ 10:30: ಗಣಹೋಮ, ಮಧ್ಯಾಹ್ನ 12:30 ಮಹಾಪೂಜೆ
  • ಸಂಜೆ 3:30ಶ್ರೀ ಗಣಪನ ವಿಗ್ರಹ ಪುತ್ತೂರು ಶ್ರೀ ಮಹಾಲಿಂಗೇಶ್ವರ  ದೇವಳದ ಗದ್ದೆಯ ಕೆರೆಯಲ್ಲಿ ವಿಸರ್ಜನೆ

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.