HomePage_Banner
HomePage_Banner
HomePage_Banner
HomePage_Banner

ಜಿಡೆಕಲ್ಲು ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಮಾಹಿತಿ ಕಾರ್ಯಾಗಾರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಜಿಡೆಕಲ್ಲಿನಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ವಿಷಯದ ಕುರಿತಾಗಿ ಪ್ರಥಮ ವರ್ಷದ ಪದವಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ, ದ್ವಿತೀಯ ಪಿ.ಯು.ಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲೆ ನಳೀನಾಕ್ಷೀ ಎ.ಎಸ್ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ ನರೇಂದ್ರ ರೈ ದೇರ್ಲ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನದ ಅನಿವಾರ್ಯತೆ ಇದರಿಂದ ಆಗುವ ಪ್ರಯೋಜನಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಎನ್.ಇ.ಪಿ ಇದರ ಕಾಲೇಜಿನ ಸಂಚಾಲಕ ಶಾಂತಾರಾಮ ಎ. ಸ್ವಾಗತಿಸಿ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಪದ್ಮನಾಭ ಕಾರ್ಯಕ್ರಮ ನಿರ್ವಹಿಸಿ, ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಜಗದೀಶ್ ವಂದಿಸಿದರು. ಐಕ್ಯೂಎಸಿ ಸಂಚಾಲಕರಾದ ಹರೀಶ್ ನಾಯಕ್ ಎನ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ಉಪನ್ಯಾಸಕರು, ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.