HomePage_Banner
HomePage_Banner
HomePage_Banner
HomePage_Banner

ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ರಲ್ಲಿ ವಿದ್ಯಾರ್ಥಿ ಕೇಂದ್ರೀಕೃತ ಶಿಕ್ಷಣ: ಡಾ. ದೇವರಾಜ ಆರ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಬೆಟ್ಟಂಪಾಡಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ – 2020 ವಿದ್ಯಾರ್ಥಿ ಕೇಂದ್ರೀಕೃತ ಶಿಕ್ಷಣ ವ್ಯವಸ್ಥೆಯಾಗಿದ್ದು 2021-22ನೇ ಸಾಲಿನಲ್ಲಿ ಈ ಯೋಜನೆಯು ಅನುಷ್ಠಾನವಾಗಲಿದೆ. ಈ ನೂತನ ಶಿಕ್ಷಣ ನೀತಿಯು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಎನ್.ಇ.ಪಿ ಸಂಚಾಲಕರಾಗಿರುವ ಡಾ. ದೇವರಾಜ ಆರ್ ಅವರು ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ನಡೆದ NEP – 2020 ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಹಿರಿಯ ಸದಸ್ಯರಾದ ರಂಗನಾಥ ರೈ ಗುತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಕೌಶಲ್ಯಾಧಾರಿತ ಶಿಕ್ಷಣವು ಹೊಸ ನೀತಿಯಿಂದ ಲಭಿಸುವುದೆಂದು ಹೇಳಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ವೆಂಕಟ್ರಮಣ ಬೋರ್ಕರ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.


ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿಯವರು ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ದೀಕ್ಷಿತ್ ಕುಮಾರ್ ಸ್ವಾಗತಿಸಿದರು. ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಉದಯರಾಜ್ ಎಸ್ ಧನ್ಯವಾದ ಸಮರ್ಪಿಸಿದರು. ಗ್ರಂಥಪಾಲಕರಾದ ರಾಮ ಕೆ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವೃಂದ, ಪೋಷಕ ವೃಂದ ಮತ್ತು ನೂತನವಾಗಿ 2021-22ನೇ ಸಾಲಿಗೆ ದಾಖಲಾತಿಗೊಂಡ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.