HomePage_Banner
HomePage_Banner
HomePage_Banner
HomePage_Banner

ನೆಲ್ಯಾಡಿ: ಸಂತಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ, ಶಿಕ್ಷಕರಿಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆ ನೆಲ್ಯಾಡಿ ಮತ್ತು ಇಂಡಿಯನ್ ಸೀನಿಯರ್ ಛೇಂಬರ್ ನೆಲ್ಯಾಡಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ದ.ಕ.ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಹಾಗೂ ನಿವೃತ್ತ ಶಿಕ್ಷಕರಿಗೆ ಅಭಿನಂದನೆ, ಸನ್ಮಾನ ಕಾರ್ಯಕ್ರಮ ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸೆ.6ರಂದು ನಡೆಯಿತು.

ಸರ್ವಪಳ್ಳಿ ಡಾ.ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಸಂತಜಾರ್ಜ್ ವಿದ್ಯಾಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್ ರವರು ಅಭಿನಂದನಾ ಭಾಷಣ ಮಾಡಿ, ಶಿಕ್ಷಕರು ತಮ್ಮ ವೃತ್ತಿಯನ್ನು ಅವಕಾಶವೆಂದು ಪರಿಗಣಿಸಿ ಉದಾತ್ತ ಧ್ಯೇಯಗಳನ್ನು ವಿದ್ಯಾರ್ಥಿಗಳಲ್ಲಿ ತುಂಬಬೇಕು, ಶಿಕ್ಷಕರು ಉತ್ತಮ ವರ್ತನೆ,ನಂಬಿಕೆ ಹಾಗೂ ಬದ್ಧತೆಗಳನ್ನು ಹೊಂದಬೇಕು ಎಂದು ಹೇಳಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಇಂಡಿಯನ್ ಸೀನಿಯರ್ ಛೇಂಬರ್ ನೆಲ್ಯಾಡಿ ಲೀಜನ್ ಅಧ್ಯಕ್ಷ ಡಾ.ಸದಾನಂದ ಕುಂದರ್‌ರವರು ಶಿಕ್ಷಕರನ್ನು ಅಭಿನಂದಿಸಿ ಶುಭಹಾರೈಸಿದರು.

2021ನೇ ಸಾಲಿನ ದ.ಕ.ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಗೋಳಿತ್ತಟ್ಟು ಸರಕಾರಿ ಉ.ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕ ಶೀನಪ್ಪ ನಾಯ್ಕರವರನ್ನು ಸಂತ ಜಾರ್ಜ್ ವಿದ್ಯಾಸಂಸ್ಥೆ ಹಾಗೂ ಇಂಡಿಯನ್ ಸೀನಿಯರ್ ಛೇಂಬರ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಉಪ್ಪಿನಂಗಡಿ ಸರಕಾರಿ ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗದ ಅಧ್ಯಾಪಕರಾಗಿದ್ದು ಇತ್ತೀಚೆಗೆ ನಿವೃತ್ತರಾದ ಗುಡ್ಡಪ್ಪ ಬಲ್ಯ, ಪಡುಬೆಟ್ಟು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿದ್ದು ನಿವೃತ್ತರಾದ ಅನ್ನಮ್ಮ ಸಿ.ಜೆ, ಹಾಗೂ ಇಚ್ಲಂಪಾಡಿ ನೇರ್ಲ ಸರಕಾರಿ ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕಿಯಾಗಿದ್ದು ನಿವೃತ್ತರಾದ ಶಾಂತಿ ವಿ.ಭಟ್‌ರವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಸಂತಜಾರ್ಜ್ ವಿದ್ಯಾಸಂಸ್ಥೆಯ ಪೂರ್ವ ವಿದ್ಯಾರ್ಥಿ ರಫೀಕ್ ಎನ್.,ರವರು ಪ್ರತಿ ವರ್ಷದಂತೆ ಈ ವರ್ಷವು ವಿದ್ಯಾಸಂಸ್ಥೆಯ ಎಲ್ಲಾ ಶಿಕ್ಷಕರಿಗೆ ಉಡುಗೊರೆಯನ್ನು ನೀಡಿ ಗುರುಭಕ್ತಿಯನ್ನು ಸಲ್ಲಿಸಿದರು.

ಸಂತಾರ್ಜ್ ಪ.ಪೂ.ಕಾಲೇಜು ಪ್ರಾಚಾರ್ಯ ಏಲಿಯಾಸ್ ಎಂ.ಕೆ., ಕನ್ನಡ ಮಾಧ್ಯಮ ಪ್ರೌಢಶಾಲಾ ಮುಖ್ಯಗುರು ತೋಮಸ್ ಎಂ.ಐ, ಆಂಗ್ಲ ಮಾಧ್ಯಮ ಪ್ರೌಢಶಾಲಾ ಮುಖ್ಯಗುರು ಹರಿಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಚಾರ್ಯ ಎಂ.ಕೆ.ಏಲಿಯಾಸ್ ಸ್ವಾಗತಿಸಿ, ಇಂಡಿಯನ್ ಸೀನಿಯರ್ ಛೇಂಬರ್ ನೆಲ್ಯಾಡಿ ಲೀಜನ್ ಕಾರ್ಯದರ್ಶಿ ಪ್ರಶಾಂತ್ ವಂದಿಸಿದರು. ಉಪನ್ಯಾಸಕ ಚೇತನ್ ಆನೆಗುಂಡಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ವಿಶ್ವನಾಥ ಶೆಟ್ಟಿ ಪ್ರಾರ್ಥಿಸಿದರು. ಸಂತ ಜಾರ್ಜ್ ವಿದ್ಯಾಸಂಸ್ಥೆಯ ನಿವೃತ್ತ ಮುಖ್ಯಗುರು ವೆಂಕಟರಮಣ ಆರ್.ರವರು ಉಪಾಹಾರ ನೀಡಿ ಸತ್ಕರಿಸಿದರು. ಕಾರ್ಯಕ್ರಮದಲ್ಲಿ ಇಂಡಿಯನ್ ಸೀನಿಯರ್ ಛೇಂಬರ್ ನೆಲ್ಯಾಡಿ ಲೀಜನ್‌ನ ಸದಸ್ಯರು, ಸಂತಜಾರ್ಜ್ ವಿದ್ಯಾಸಂಸ್ಥೆಯ ಉಪನ್ಯಾಸಕರು, ಶಿಕ್ಷಕರು ಉಪಸ್ಥಿತರಿದ್ದರು. 

 

 

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.