HomePage_Banner
HomePage_Banner
HomePage_Banner
HomePage_Banner

ಸೆ.10 : ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದದಲ್ಲಿ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಟ್ಟಂಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಪ್ರತಿ ವರ್ಷ ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದು ಈ ಬಾರಿ36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವವನ್ನು ಕೋವಿಡ್ 19ರ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಸೆ.10ರಂದು 1 ದಿನಕ್ಕೆ ಸೀಮಿತಗೊಳಿಸಿ ಆಚರಿಸಲಾಗುತ್ತಿದೆ. ಬ್ರಹ್ಮಶ್ರೀ ವಸಂತ ಕುಮಾರ ಕೆದಿಲಾರವರ ಶಿಷ್ಯ ಪುತ್ತೂರು ರಾಜೇಶ್ ಭಟ್ ರವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಬೆಳಿಗ್ಗೆ 9 ರಿಂದ ಗಣೇಶ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಪ್ರಗತಿಪರ ಕೃಷಿಕ ಹಾಗೂ ರೆಂಜ ಸಿದ್ಧಿವಿನಾಯಕ ವಾಣಿಜ್ಯ ಸಂಕೀರ್ಣದ ಮಾಲಕ ವಿಠಲ ಹೊಳ್ಳ ತೋಟದಮೂಲೆರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಳಿಕ ಗಣಪತಿ ಹೋಮ, ವಿವಿಧ ಭಜನಾ ಮಂಡಳಿಯರಿಂದ ಭಜನೆ, ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ ಚೆಲ್ಯಡ್ಕದ ನದಿಯಲ್ಲಿ ಗಣೇಶ ವಿಗ್ರಹ ಜಲಸ್ಥಂಬನೆ ನಡೆಯಲಿದೆ. ಕೋವಿಡ್ ನಿಯಾಮಾವಳಿಯಂತೆ ಕಾರ್ಯಕ್ರಮ ನಡೆಯಲಿದೆ. ಎಂದು ಸಮಿತಿ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.