HomePage_Banner
HomePage_Banner
HomePage_Banner
HomePage_Banner

ಫಿಲೋಮಿನಾದಲ್ಲಿ ಪುತ್ತೂರು, ಕಡಬ, ಸುಳ್ಯ ತಾಲೂಕು ಸರಕಾರಿ/ಅನುದಾನಿತ ಪ.ಪೂ ಕಾಲೇಜುಗಳ ಪ್ರಾಂಶುಪಾಲರ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕು ಸರಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಿಯೋಜನೆ ಹಾಗೂ ಅತಿಥಿ ಉಪನ್ಯಾಸಕರನ್ನು ಒದಗಿಸುವ ಬಗ್ಗೆ ಪ್ರಾಂಶುಪಾಲರುಗಳ ಸಭೆಯನ್ನು ಸೆ.7ರಂದು ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮಂಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯಣ್ಣ ಸಿ.ಡಿರವರು ಮಾತನಾಡಿ, ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕು ಸರಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಿಯೋಜನೆ ಹಾಗೂ ಅತಿಥಿ ಉಪನ್ಯಾಸಕರನ್ನು ಒದಗಿಸುವ ಕುರಿತು ಹಮ್ಮಿಕೊಂಡ ಈ ಸಭೆಯು ಬಹಳ ಅರ್ಥಪೂರ್ಣವಾಗಿದೆ. ಯಾರಿಗೆ ಎಲ್ಲಿ ಬೇಕು, ಅಲ್ಲಿಗೆ ನಿಯೋಜನೆಗಳಿಸುವ ಪ್ರಕ್ರಿಯೆಯು ಉತ್ತಮ ನಡೆಯಾಗಿದೆ. ಈ ಫಿಲೋಮಿನಾ ಕಾಲೇಜು ಕ್ಯಾಂಪಸ್ ಬಹಳ ಸುಂದರವಾಗಿದ್ದು ಹಲವು ವೈಶಿಷ್ಟ್ಯತೆಗಳನ್ನು ಹೊಂದಿದೆ. ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ವಾತಾವರಣ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಕ್ರೀಡಾ ಚಟುವಟಿಕೆಗಳು, ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹ ಇವೆಲ್ಲವುದರಿಂದ ಈ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದರು.

ಬಂಟ್ವಾಳ ಭೀಮುಡ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯೂಸುಫ್, ನೆಲ್ಯಾಡಿ ಬೆಥನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಾರ್ಜ್ ಟಿ.ಎಸ್, ಗಂಗಾಧರ ಗೌಡ ಸಹಿತ ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕು ಸರಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ|ವಿಜಯ್ ಲೋಬೋ ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಸುಮನಾ ಪ್ರಶಾಂತ್ ಪ್ರಾರ್ಥಿಸಿದರು. ಕಾಲೇಜಿನ ಹಿಂದಿ ವಿಭಾಗದ ಉಪನ್ಯಾಸಕಿ ಡಾ|ಆಶಾ ಸಾವಿತ್ರಿ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾಗಿ ನೂತನವಾಗಿ ಅಧಿಕಾರ ವಹಿಸಿಕೊಂಡ ಜಯಣ್ಣ ಸಿ.ಡಿರವರನ್ನು ಈ ಸಂದರ್ಭದಲ್ಲಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಕಬಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪ್ರೇಮಲತಾ ಸನ್ಮಾನಿತರ ಬಗ್ಗೆ ಮಾತನಾಡಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.