HomePage_Banner
HomePage_Banner
HomePage_Banner
HomePage_Banner

ಕಡಬ: ಕಾರ್ಮಿಕ ಇಲಾಖೆಯಿಂದ ಆಹಾರ ಕಿಟ್ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಕೊಡಮಾಡಿದ ಆಹಾರ ಧಾನ್ಯಗಳ ಕಿಟ್‌ಗಳನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ಸದಸ್ಯರಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮೂಲಕ ಕಡಬ ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ವಿತರಿಸಲಾಯಿತು.

ಕಿಟ್‌ಗಳನ್ನು ವಿತರಿಸಿ ಮಾತನಾಡಿದ ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಅವರು ಕೋವಿಡ್ ನಿಯಂತ್ರಣದಲ್ಲಿ ಪತ್ರಕರ್ತರ ಸಹಕಾರವೂ ಅನನ್ಯವಾದುದು. ಸರಕಾರದ ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಜೊತೆಗೆ ಪತ್ರಕರ್ತರು ಕೂಡ ತಮ್ಮ ಪ್ರಾಣದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಕಾರ್ಮಿಕ ಇಲಾಖೆಯ ಮೂಲಕ ಪತ್ರಕರ್ತರಿಗೂ ಆಹಾರ ಧಾನ್ಯಗಳ ಕಿಟ್ ನೀಡುತ್ತಿರುವುದು ಶ್ಲಾಘನೀಯ ಎಂದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರು ಮಾತನಾಡಿ ಕಾರ್ಮಿಕ ಇಲಾಖೆಯು ಜಿಲ್ಲಾ ಪತ್ರಕರ್ತರ ಸಂಘದ ಕೋರಿಕೆಯ ಮೇರೆಗೆ ಪತ್ರಕರ್ತರಿಗೆ ಆಹಾರ ಧಾನ್ಯಗಳ ಕಿಟ್‌ಗಳನ್ನು ನೀಡಿದ್ದು, ಅವುಗಳನ್ನು ಜಿಲ್ಲೆಯ ವಿವಿಧ ತಾಲೂಕುಗಳ ಪತ್ರಕರ್ತರ ಸಂಘಗಳ ಮೂಲಕ ವಿತರಿಸಲಾಗಿದೆ ಎಂದರು. ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ಭಾಸ್ಕರ್ ರೈ ಕಟ್ಟ, ಪುಷ್ಪರಾಜ್ ಬಿ.ಎನ್., ಕಡಬ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ವಿಜಯಕುಮಾರ್, ಪದಾಧಿಕಾರಿಗಳಾದ ಪ್ರವೀಣ್‌ರಾಜ್ ಕೊಲ, ತಸ್ಲೀಮ್ ಮರ್ದಾಳ, ಪ್ರಕಾಶ್ ಕೋಡಿಂಬಾಳ, ಲೋಕೇಶ್ ಬಿ.ಎನ್.ಸುಬ್ರಹ್ಮಣ್ಯ, ಪ್ರವೀಣ್ ಚೆನ್ನಾವರ, ಪಟ್ಟಣ ಪಂಚಾಯತ್ ಸಿಬಂದಿ ಹರೀಶ್ ಬೆದ್ರಾಜೆ ಮುಂತಾದವರು ಉಪಸ್ಥಿತರಿದ್ದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ. ಸ್ವಾಗತಿಸಿ, ಪ್ರಸ್ತಾವನೆಗೈದರು. ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಲ ವಂದಿಸಿದರು.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.