HomePage_Banner
HomePage_Banner
HomePage_Banner
HomePage_Banner

ವೀಕೆಂಡ್ ಕರ್ಫ್ಯೂ ತೆರವು: ಶಾಸಕರಿಗೆ, ಸುದ್ದಿ ಬಿಡುಗಡೆ ಸಂಪಾದಕರಿಗೆ ಉಪ್ಪಿನಂಗಡಿ ವರ್ತಕ ಸಂಘದಿಂದ ಕೃತಜ್ಞತೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ವೀಕೆಂಡ್ ಕರ್ಫ್ಯೂ ತೆರವುಗೊಳಿಸುವ ಮೂಲಕ ವರ್ತಕ ಸಮುದಾಯದ ನೋವಿಗೆ ಸ್ಪಂದಿಸಿರುವ ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ವೀಕೆಂಡ್ ಕರ್ಫ್ಯೂನಿಂದಾಗಿ ಜನರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸತತ ಬೆಳಕು ಚೆಲ್ಲಿದ ಸುದ್ದಿ ಬಿಡುಗಡೆ ಪತ್ರಿಕೆಯ ಸಂಪಾದಕ ಡಾ.ಯು.ಪಿ.ಶಿವಾನಂದರವರಿಗೆ ಉಪ್ಪಿನಂಗಡಿ ವರ್ತಕ ಸಂಘ ಕೃತಜ್ಞತೆ ಸಲ್ಲಿಸುತ್ತದೆ ಎಂದು ಸಂಘದ ಅಧ್ಯಕ್ಷ ಪ್ರಶಾಂತ್ ಡಿ’ಕೋಸ್ತ ಮತ್ತು ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಯುನಿಕ್ ತಿಳಿಸಿದ್ದಾರೆ.

ಕೊರೋನಾದ ಹಿನ್ನೆಲೆಯಲ್ಲಿ ನಿರಂತರವಾಗಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂನಿಂದಾಗಿ ವರ್ತಕ ಸಮುದಾಯ ತತ್ತರಿಸಿ ಹೋಗಿದೆ. ಸಂಕಷ್ಟದ ಬದುಕು ಅನುಭವಿಸುವಂತಾಗಿದೆ. ಜೀವನ ನಡೆಸುವುದೇ ಕಷ್ಟಕರವಾಗಿದೆ. ಈ ಎಲ್ಲಾ ಹಿನ್ನಲೆಯಲ್ಲಿ ವರ್ತಕ ಸಮುದಾಯ ಶಾಸಕರ ಗಮನ ಸೆಳೆದಿತ್ತು. ನಮ್ಮ ಮನವಿ ಸ್ವೀಕರಿಸಿದ್ದ ಶಾಸಕರು ಸರಕಾರದ ಗಮನಕ್ಕೆ ತಂದು ವೀಕೆಂಡ್ ಕರ್ಫ್ಯೂ ತೆರವು ಮಾಡಲು ಸರಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದ್ದರು. ಅದರಂತೆ ಇದೀಗ ವೀಕೆಂಡ್ ಕರ್ಫ್ಯೂ ತೆರವು ಮಾಡಲು ಸರಕಾರ ನಿರ್ಧರಿಸಿದೆ. ಇದಕ್ಕಾಗಿ ಶಾಸಕ ಸಂಜೀವ ಮಠಂದೂರುರವರಿಗೆ ಮತ್ತು ವೀಕೆಂಡ್ ಕರ್ಫ್ಯೂನಿಂದ ಜನಸಾಮಾನ್ಯರಿಗೆ, ವರ್ತಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಪತ್ರಿಕೆ ಮತ್ತು ಚಾನೆಲ್ ಮೂಲಕ ನಿರಂತರ ಜಾಗೃತಿ ಮೂಡಿಸಿದ ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕ ಡಾ.ಯು.ಪಿ.ಶಿವಾನಂದರವರಿಗೆ ಉಪ್ಪಿನಂಗಡಿ ವರ್ತಕ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ವರ್ತಕರು ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಪ್ರಶಾಂತ್ ಡಿ’ಕೋಸ್ತ ಮತ್ತು ಅಬ್ದುಲ್ ರಹಿಮಾನ್ ಯುನಿಕ್ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.