HomePage_Banner
HomePage_Banner
HomePage_Banner
HomePage_Banner

ಕುಂಬ್ರ ಶ್ರೀರಾಮ ಭಜನಾ ಮಂದಿರದಲ್ಲಿ ಲೋಕಕಲ್ಯಾರ್ಥವಾಗಿ ಸಂಪ್ರದಾಯ ಬದ್ಧ 40 ನೇ ವರ್ಷದ ಶ್ರೀ ಗಣೇಶೋತ್ಸವ, ಅನ್ನಸಂತರ್ಪಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಪುತ್ತೂರು: ಒಳಮೊಗ್ರು ಗ್ರಾಮದ ಕುಂಬ್ರ ಶ್ರೀರಾಮ ಭಜನಾ ಮಂದಿರದಲ್ಲಿ ಲೋಕಕಲ್ಯಾಣಾರ್ಥವಾಗಿ ಸಂಪ್ರದಾಯ ಬದ್ಧವಾದ ೪೦ ವರ್ಷದ ಶ್ರೀ ಗಣೇಶೋತ್ಸವವನ್ನು ಕೋವಿಡ್ 19 ಹಿನ್ನೆಲೆಯಲ್ಲಿ ಸರಕಾರದ ಸುತ್ತೋಲೆಯಂತೆ ಸರಳ ರೀತಿಯಲ್ಲಿ ಸೆ.10 ರಂದು ಆಚರಿಸಲಾಯಿತು. ಬೆಳಿಗ್ಗೆ ಗಣಪತಿ ವಿಗ್ರಹದ ಪ್ರತಿಷ್ಠೆ ನಡೆದು ಗಣಪತಿ ಹೋಮ ನಡೆಯಿತು. ಕುಂಬ್ರ ಶ್ರೀನಿಲಯದ ಶ್ರೀನಿವಾಸ ರೈ ಮಕ್ಕಳು ಈ ವರ್ಷದ ಗಣೇಶ ವಿಗ್ರಹವನ್ನು ಸೇವಾರೂಪದಲ್ಲಿ ನೀಡಿದ್ದರು. ವಿಗ್ರಹ ಪ್ರತಿಷ್ಠೆಯ ಬಳಿಕ ಕುಂಬ್ರ ಶ್ರೀರಾಮ ಭಜನಾ ಮಂಡಳಿಯವರಿಂದ ಭಜನಾ ಸೇವೆ ನಡೆಯಿತು. ಮಧ್ಯಾಹ್ನ ಶ್ರೀ ಗಣೇಶನಿಗೆ ಮಹಾಪೂಜೆ ನಡೆದು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಅನ್ನಸಂತರ್ಪಣೆಯ ಬಳಿಕ ಧಾರ್ಮಿಕ ಚಿಂತನೆ ಕಾರ್ಯಕ್ರಮ ನಡೆಯಿತು. ಭಕ್ತಾಧಿಗಳು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಸಹಿತ ಹಲವು ಮಂದಿ ಗಣ್ಯರು ಆಗಮಿಸಿ ಪ್ರಸಾದ ಸ್ವೀಕರಿಸಿದರು.


ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಬಾಬು ಪೂಜಾರಿ ಬಡಕ್ಕೋಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ರೈ ಪರ್ಪುಂಜ, ಉಪಾಧ್ಯಕ್ಷೆ ಉಷಾ ನಾರಾಯಣ ಗೌಡ, ಜತೆ ಕಾರ್ಯದರ್ಶಿ ಚಂದ್ರಶೇಖರ ರೈ ಕುರಿಕ್ಕಾರ, ಕೋಶಾಧಿಕಾರಿ ರಾಜ್‌ಪ್ರಕಾಶ್ ರೈ ಕುಂಬ್ರ, ಗಣೇಶೋತ್ಸವ ಸಮಿತಿ ಸಂಚಾಲಕ ಪದ್ಮನಾಭ ರೈ ಅರೆಪ್ಪಾಡಿ ಹಾಗೂ ಶ್ರೀರಾಮ ಭಜನಾ ಮಂದಿರದ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರುಗಳು ಭಕ್ತಾಧಿಗಳನ್ನು ಸ್ವಾಗತಿಸಿ ಪ್ರಸಾದ ನೀಡಿ ಸತ್ಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.