HomePage_Banner
HomePage_Banner
HomePage_Banner
HomePage_Banner

ಅರಿಯಡ್ಕ: ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷರ ಮನೆಗಳಲ್ಲಿ ನಾಮಫಲಕ ಅಳವಡಿಸುವ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಅರಿಯಡ್ಕ: ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷರ ಮನೆಗಳಲ್ಲಿ ನಾಮಫಲಕ ಅಳವಡಿಸುವ ಕಾರ್ಯಕ್ರಮದ ಅಂಗವಾಗಿ ಅರಿಯಡ್ಕ ಗ್ರಾಮದ 4 ಬೂತ್ ಅಧ್ಯಕ್ಷರ ಮನೆಗಳಲ್ಲಿ ನಾಮಫಲಕ ಅಳವಡಿಸುವ ಕಾರ್ಯಕ್ರಮ ಸೆ 9 ರಂದು ನಡೆಯಿತು. ಶಾಸಕ ಸಂಜೀವ ಮಠಂದೂರು ರವರ ನೇತೃತ್ವದಲ್ಲಿ ಅಧ್ಯಕ್ಷರ ಮನೆಯಲ್ಲಿ ನಾಮಫಲಕ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಅರಿಯಡ್ಕ ಬೂತ್ ಸಮಿತಿ 1ರ ಅಧ್ಯಕ್ಷ ಹರಿಪ್ರಸಾದ್ ಮಾಯಿಲಕೊಚ್ಚಿ,ಬೂತ್ 2 ರ ಅಧ್ಯಕ್ಷ ಗಣೇಶ್ ರೈ ಬಳಕ್ಕ, ಬೂತ್ 3ರ ಅಧ್ಯಕ್ಷ ಪ್ರಮೋದ್ ರೈ ಪನೆಕ್ಕಳ, ಮತ್ತು ಬೂತ್ 4 ಅಧ್ಯಕ್ಷ ಶಿವರಾಮ ಪಾಟಾಳಿ ಇವರ ಮನೆಯಲ್ಲಿ ಭಾರತಮಾತೆಗೆ ದೀಪಬೆಳಗಿಸಿ ಪುಷ್ಪಾರ್ಚನೆ ಮಾಡಿ ಬಳಿಕ ನಾಮಫಲಕ ಅಳವಡಿಸಲಾಯಿತು.



ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಬಿ.ಜೆ.ಪಿ ಮಂಡಲದ ಅಧ್ಯಕ್ಷ ಸಾಧನ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ನಿತೀಶ್ ಶಾಂತಿವನ, ಕಾರ್ಯದರ್ಶಿ ಯತಿಂದ್ರ ಕೊಚ್ಚಿ, ಹಿಂದುಳಿದ ಮೋರ್ಛಾಗಳ ಜಿಲ್ಲಾಧ್ಯಕ್ಷ ಆರ್ ಸಿ ನಾರಾಯಣ, ನೆಟ್ಟಣಿಗೆ ಮುಡ್ನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಜಯ ರೈ ಕೊರಂಗ, ಪ್ರಧಾನ ಕಾರ್ಯದರ್ಶಿ ತೀರ್ಥನಂದ ದುಗ್ಗಲ, ಅರಿಯಡ್ಕ ಶಕ್ತಿ ಕೇಂದ್ರದ ಅಧ್ಯಕ್ಷ ಸಚಿನ್ ರೈ ಪಾಪೆಮಜಲು, ತಾಲೂಕು ಮಾಧ್ಯಮ ಸಂಚಾಲಕ ತಿಲಕ್ ರೈ ಕುತ್ಯಾಡಿ ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯ ಉಪಾಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಅರಿಯಡ್ಕ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷ ಲೋಕೇಶ್ ರೈ ಅಮೈ, ಪಂಚಾಯತ್ ಸದಸ್ಯರಾದ ರಾಜೇಶ್ ಮಣಿಯಾಣಿ ತ್ಯಾಗರಾಜೆ, ಉಷಾರೇಖಾ ರೈ, ಹರೀಶ್ ರೈ ಜಾರತ್ತಾರು, ರೇಣುಕಾ ಕರ್ಕೆರಾ ಮಡ್ಯಂಗಳ, ನಾರಾಯಣ ನಾಯ್ಕ ಚಾಕೋಟೆ, ಪುಷ್ಪಲತಾ ಮರತ್ತಮೂಲೆ, ಭಾರತಿ ವಸಂತ್ ಕೌಡಿಚ್ಚಾರು, ಮೀನಾಕ್ಷಿ ಪಾಪೆಮಜಲು, ಸದಾನಂದ ಮಣಿಯಾಣಿ, ಸಾವಿತ್ರಿ ಪೊನ್ನೆತ್ತಳ್ಕ, ಬೂತ್ ಕಾರ್ಯದರ್ಶಿಗಳಾದ ರಾಜೇಶ್ ಮಯೂರ, ಗಣೇಶ್ ಶೇಖಮಲೆ, ಚರಣ್ ಎಂ.ಡಿ ಹೊಸಗದ್ದೆ, ಮತ್ತು ಸತೀಶ್ ಪೈಲಕಲ್ಲು , ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.