HomePage_Banner
HomePage_Banner
HomePage_Banner
HomePage_Banner

ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದದಲ್ಲಿ 36 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಟ್ಟಂಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯಿಂದ ಪ್ರತಿ ವರ್ಷ ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದು ಈ ಬಾರಿ 36 ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವವನ್ನು ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಸೆ.10ರಂದು 1 ದಿನಕ್ಕೆ ಸೀಮಿತಗೊಳಿಸಿ ಸರಳ ರೀತಿಯಲ್ಲಿ ಆಚರಿಸಲಾಯಿತು.

ಬೆಳಿಗ್ಗೆ ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶ್ರೀಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ಪ್ರಗತಿಪರ ಕೃಷಿಕ ಹಾಗೂ ರೆಂಜ ಸಿದ್ಧಿವಿನಾಯಕ ವಾಣಿಜ್ಯ ಸಂಕೀರ್ಣದ ಮಾಲಕ ವಿಠಲ ಹೊಳ್ಳ ತೋಟದಮೂಲೆರವರು ದೀಪ ಬೆಳಗಿಸಿ ಬಾಲಗಂಗಾದರ ತಿಲಕ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಬಳಿಕ ಗಣಪತಿ ಹೋಮ, ಶ್ರೀಮಹಾಲಿಂಗೇಶ್ವರ ಭಜನಾ ಸಂಘ ಬೆಟ್ಟಂಪಾಡಿ, ಶಬರಿ ಮಹಿಳಾ ಭಜನಾ ಸಂಘ ಶ್ರೀರಾಮನಗರ ರೆಂಜ, ಶ್ರೀಮಹಾಲಿಂಗೇಶ್ವರ ಮಹಿಳಾ ಭಜನಾ ಸಂಘ ಬೆಟ್ಟಂಪಾಡಿ, ಹಾಗೂ ಶ್ರೀಭ್ರಮರಾಂಬಿಕಾ ಭಜನಾ ಸಂಘ ಬೆಟ್ಟಂಪಾಡಿ ಇವರಿಂದ ಭಜನೆ, ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಬ್ರಹ್ಮಶ್ರೀ ವಸಂತ ಕುಮಾರ ಕೆದಿಲಾಂiರವರ ಶಿಷ್ಯ ಪುತ್ತೂರು ರಾಜೇಶ್ ಭಟ್ ರವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

ಅನ್ನಸಂತರ್ಪಣೆ: ಬೆಟ್ಟಂಪಾಡಿ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಅನ್ನಸಂತರ್ಪಣೆ ವಿಶೇಷವಾಗಿದ್ದು ಈ ಬಾರಿ ಸರಳವಾಗಿ ಆಚರಿಸಿದರೂ ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಜನರು ಅನ್ನಸಂತರ್ಪಣೆ ಸ್ವೀಕರಿಸಿದರು.

ಮಂತ್ರಾಕ್ಷತೆ : ಸಂಜೆ ಶ್ರೀಗಣೇಶ ವಿಗ್ರಹ ಜಲಸ್ಥಂಬನ ಬಳಿಕ ಶ್ರೀದೇವಾಲಯದಲ್ಲಿ ಮಂತ್ರಾಕ್ಷತೆ ಕಾರ್ಯಕ್ರಮ ನಡೆಯಿತು.

ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ಅನುವಂಶಿಕ ಮೋಕ್ತೇಸರ ವಿನೋದ್ ಬಲ್ಲಾಳ್ ಬೀಡು, ಆಡಳಿತ ಮೋಕ್ತೇಸರ ವಿನೋದ್ ಕುಮಾರ್ ರೈ ಗುತ್ತು, ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಮನಮೋಹನ ರೈ ಚೆಲ್ಯಡ್ಕ, ಅಧ್ಯಕ್ಷ ನಾಗೇಶ್ ರೈ ಮೂರ್ಕಾಜೆ, ಪ್ರಧಾನ ಕಾರ್ಯದರ್ಶಿ ರಮೇಶ್ ಗೌಡ ಬಳ್ಳಿತ್ತಡ್ಡ, ಕೋಶಾಧಿಕಾರಿ ಉದಯ ಕಕ್ಕೂರು, ದೇವಾಲಯದ ಅರ್ಚಕ ವೃಂದ ಸೇರಿದಂತೆ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ಶ್ರೀಗಣೇಶ ವಿಗ್ರಹ ಜಲಸ್ಥಂಬನ

ಸಂಜೆ ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದಿಂದ ಚೆಲ್ಯಡ್ಕದ ನದಿತಟಕ್ಕೆ ಗಣೇಶ ವಿಗ್ರಹ ತರಲಾಯಿತು. ಬಳಿಕ ಮಹಾಮಂಗಳಾರತಿ ನಡೆದು ಚೆಲ್ಯಡ್ಕದ ನದಿಯಲ್ಲಿ ಜಲಸ್ಥಂಬನೆ ನಡೆಸಲಾಯಿತು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.