HomePage_Banner
HomePage_Banner
HomePage_Banner
HomePage_Banner

ಏಣಿತಡ್ಕ ಕಾಲೋನಿ ರಸ್ತೆ ಕಾಂಕ್ರಿಟೀಕರಣ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಕೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಏನು ಮಾಡಿದೆ; ಅಂಗಾರ ಪ್ರಶ್ನೆ

ರಾಮಕುಂಜ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ಅಭೂತಪೂರ್ವ ಅಭಿವೃದ್ಧಿ ಕಾರ್ಯಗಳಾಗಿವೆ ಹಾಗೂ ಆಗುತ್ತಿದೆ. ಆದರೆ ಕೆಳಗಿನಿಂದ ಮೇಲಿನ ತನಕ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಎಂದು ಬಂದರು ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಸಚಿವರಾದ ಎಸ್.ಅಂಗಾರ ಪ್ರಶ್ನಿಸಿದರು.

ರಾಜ್ಯ ಸರಕಾರದ 10  ಲಕ್ಷ ರೂ., ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಕೊಲ ಗ್ರಾಮದ ಏಣಿತಡ್ಕ ಕಾಲೋನಿ ರಸ್ತೆಯನ್ನು ಏಣಿತಡ್ಕ ದೇವಿನಗರ ಶಿವಾಜಿ ಸರ್ಕಲ್‌ನಲ್ಲಿ ಸೆ.11 ರಂದು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕೊರೋನಾ ಸಂಕಷ್ಟದ ಮಧ್ಯೆಯೂ ಅತ್ಯುತ್ತಮ ಆಡಳಿತದೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಇದನ್ನು ಸಹಿಸದ ವಿರೋಧಿಗಳು ಕೇವಲ ಅಪಪ್ರಚಾರ ಮಾಡುತ್ತಿದ್ದಾರೆ. ಕೆಳಗಿನಿಂದ ಮೇಲಿನ ತನಕ ಅಧಿಕಾರವಿದ್ದರೂ ಬಿಜೆಪಿಯವರು ಏನು ಮಾಡಿದ್ದಾರೆ ಎಂದು ಪ್ರಶ್ನಿಸುತ್ತಾ ಜನರನ್ನು ದಾರಿತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ನಾವು ಗ್ರಾಮೀಣ ಭಾಗದ ಮೂಲಭೂತ ವ್ಯವಸ್ಥೆಗಳಾದ ರಸ್ತೆ, ಕುಡಿಯುವ ನೀರು, ಸೇತುವೆ ನಿರ್ಮಾಣ ಮುಂತಾದ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುತ್ತಿದ್ದೇವೆ. ಇದನ್ನು ಕಾರ್ಯಕರ್ತರು ಜನರಿಗೆ ಮುಟ್ಟಿಸುವ ಕಾರ್ಯ ಮಾಡಬೇಕು, ಸರಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ಜನ ಅನುಭವಿಸಂತಾಗಬೇಕು ಎಂದು ಸಚಿವರು ಹೇಳಿದರು.


ಈ ಸಂದರ್ಭದಲ್ಲಿ ಬಿಜೆಪಿ ಪ್ರಶಿಕ್ಷಣ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಕೃಷ್ಣ ಶೆಟ್ಟಿ ಕಡಬ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಆಶಾ ತಿಮ್ಮಪ್ಪ ಗೌಡ, ಕಡಬ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಜಯಂತಿ ಆರ್ ಗೌಡ, ಮಾಜಿ ಸದಸ್ಯೆ ತೇಜಸ್ವಿನಿ ಕಟ್ಟಪುಣಿ, ಬಿಜೆಪಿ ಎಸ್‌ಟಿ ಮೋರ್ಚಾದ ಮುಖಂಡ ಪೂವಪ್ಪ ನಾಯ್ಕ್, ಆಲಂಕಾರು ಸಿ.ಎ ಬ್ಯಾಂಕ್ ಅಧ್ಯಕ್ಷ ಧರ್ಮಪಾಲ ರಾವ್ ಕಜೆ, ನಿರ್ದೇಶಕಿ ನಳಿನಿ ಕಾಯರಟ್ಟ, ಕೊಲ ಬಿಜೆಪಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಪ್ರದೀಪ್ ರೈ ಮನವಳಿಕೆ, ಕಾರ್ಯದರ್ಶಿ ಸುರೇಶ್ ದೇಂತಾರು, ಮುಖಂಡರಾದ ಲಕ್ಷ್ಮೀನಾರಾಯಣ ರಾವ್ ಆತೂರು, ಬಾಲಕೃಷ್ಣ ಗೌಡ ಬೇಂಗದಪಡ್ಪು, ಶೀನಪ್ಪ ಗೌಡ ವಳಕಡಮ, ಪ್ರಶಾಂತ್ ಆರ್.ಕೆ, ಸದಾಶಿವ ಶೆಟ್ಟಿ ಮಾರಂಗ, ರಾಮ ನಾಯ್ಕ ಕೊರಂತಾಜೆ, ಕೇಶವ ಗಾಂಧಿಪೇಟೆ, ನೇತ್ರಾಕ್ಷ ನಾಯ್ಕ, ಶಿವಣ್ಣ ಗೌಡ ಕಕ್ವೆ, ಉದಯ ನಾಯ್ಕ, ಉಮೇಶ್ ಸಂಕೇಶ, ಕೊಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರ್ಷಿತ್, ಉಪಾಧ್ಯಕ್ಷೆ ಕಮಲಾಕ್ಷಿ ಪಾಜಲಿಕೆ, ಸದಸ್ಯರಾದ ಚಂದ್ರಶೇಖರ ಗೌಡ, ಚಿದಾನಂದ ಪಾನ್ಯಾಲ್, ಶಶಿಕಲಾ, ಭಾರತಿ ಮತ್ತಿತರರು ಉಪಸ್ಥಿತರಿದ್ದರು. ಆಲಂಕಾರು ಸಿ.ಎ ಬ್ಯಾಂಕ್ ನಿರ್ದೆಶಕ ರಾಮಚಂದ್ರ ನಾಯ್ಕ ಸ್ವಾಗತಿಸಿ, ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.