HomePage_Banner
HomePage_Banner
HomePage_Banner
HomePage_Banner

ಉದನೆಗೆ ವಿಹಿಂಪ, ಬಜರಂಗದಳ ಮುಖಂಡರ ಭೇಟಿ – ವಾರದೊಳಗೆ ಆರೋಪಿಗಳ ಬಂಧಿಸದೇ ಇದ್ದಲ್ಲಿ ಸೆ.21 ರಂದು ಹೆದ್ದಾರಿ ತಡೆದು ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಉದನೆ ಪರಶುರಾಮ ಮೈದಾನದಲ್ಲಿರುವ ಗಣಪತಿಕಟ್ಟೆಗೆ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದ ಮುಖಂಡರು ಸೆ.11 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಈ ವೇಳೆ ಮಾತನಾಡಿದ ವಿಶ್ವಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ನವೀನ್ ನೆರಿಯರವರು, ಗಣಪತಿ ಕಟ್ಟೆಗೆ ಹಾನಿಗೊಳಿಸಿದ ದುಷ್ಕರ್ಮಿಗಳನ್ನು ಪೊಲೀಸರು 1 ವಾರದೊಳಗೆ ಬಂಧಿಸಬೇಕು. ಇಲ್ಲವಾದಲ್ಲಿ ಸೆ.21 ರಂದು ಉದನೆ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಮಾಡಿ ಪ್ರತಿಭಟನೆ ನಡೆಸುವುದಾಗಿ ಮುನ್ನೆಚ್ಚರಿಕೆ ನೀಡಿದರು. ವಿಹಿಂಪ ಕಡಬ ಪ್ರಖಂಡದ ಅಧ್ಯಕ್ಷರಾದ ರಾಧಾಕೃಷ್ಣ ಕೋಲ್ಪೆ ಮಾತನಾಡಿ, ಗಣಪತಿ ಕಟ್ಟೆಗೆ `ಹಾನಿಗೊಳಿಸಿರುವ ಘಟನೆಯು ಹಿಂದೂ ಸಮಾಜದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ. ತಪ್ಪಿತಸ್ಥರು ಯಾರೇ ಆಗಿರಲಿ ಅವರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ವಿಹಿಂಪ ಕಡಬ ಪ್ರಖಂಡದ ಕಾರ್ಯದರ್ಶಿ ಪ್ರಮೋದ್ ರೈ ನಂದುಗುರಿ, ಬಜರಂಗದಳ ಸಂಚಾಲಕ ಮೂಲಚಂದ್ರ ಕಾಂಚನ, ಸುರಕ್ಷಾ ಪ್ರಮುಖ್ ಜಯಂತ ಕಲ್ಲುಗುಡ್ಡೆ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಓರ್ಕಳ, ವಿಹಿಂಪ ಬಜರಂಗದಳ ಉದನೆ ಘಟಕದ ಅಧ್ಯಕ್ಷ ಶಿವರಾಜ್ ಬನಾರಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಸೇರಿದಂತೆ ವಿಶ್ವಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.