HomePage_Banner
HomePage_Banner
HomePage_Banner
HomePage_Banner

ರೋಟರಿ ಈಸ್ಟ್, ಮುಳಿಯ ಜ್ಯುವೆಲ್ಸ್, ರೋಟರ್ಯಾಕ್ಟ್ ಕ್ಲಬ್ ನಿಂದ ರಕ್ತದಾನ ಶಿಬಿರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  •  ಕೋರೋನ ಸಂದರ್ಭದಲ್ಲಿ ರಕ್ತದಾನದಂತಹ ಶ್ರೇಷ್ಠ ಕಾರ್ಯ ನಡೆಸುತ್ತಿರುವುದು ಶ್ಲಾಘನೀಯ- ಡಾ. ದೀಪಕ್ ರೈ

ಪುತ್ತೂರು: ಪುತ್ತೂರಿನ ಬ್ಲಡ್ ಬ್ಯಾಂಕಿನಲ್ಲಿ ಸೆ.11 ರಂದು ರೋಟರಿ ಕ್ಲಬ್ ಪುತ್ತೂರು ಪೂರ್ವ, ಮುಳಿಯ ಜ್ಯುವೆಲ್ಸ್ ಮತ್ತು ರೋಟರಾಕ್ಟ್ ಕ್ಲಬ್ ತಿಂಗಳಾಡಿ ಇದರ ಜಂಟಿ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರವು ನಡೆಯಿತು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ತಾಲೂಕಿನ ಆರೋಗ್ಯಾಧಿಕಾರಿ ಡಾ.ದೀಪಕ್ ರೈಯವರು, ಕೋರೋನ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಮತ್ತು ಬೇಡಿಕೆ ಹೆಚ್ಚಾಗಿದ್ದು, ಕೋರೋನ ವ್ಯಾಕ್ಸಿನ್ ನ ನಿಯಮವಾಲಿಗಳಿನಿಂದಾಗಿ ರಕ್ತದಾನಿಗಳ ಕೊರತೆ ಎದುರಾಗುತ್ತಿರುವ ಈ ಸಮಯದಲ್ಲಿ ತಾವು ಆಯೋಜನೆ ಮಾಡಿದ ರಕ್ತದಾನ ಶಿಬಿರವು ಅತ್ಯಂತ ಶ್ಲಾಘನೀಯ ಎಂದು ಹೇಳಿದರು.ರಕ್ತದಾನ ಶ್ರೇಷ್ಠ ದಾನ ಮತ್ತು ರೋಟರಿ ಸಂಸ್ಥೆಗಳು ಸಮಾಜಕ್ಕೆ ನೀಡುತ್ತಿರುವ ಕೊಡುಗೆ ಅಪಾರ ಹಾಗೂ ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ರೋಟರಿ ಕ್ಲಬ್ ಗಳ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ರೋಟರಿ ಕ್ಲಬ್ ಪುತ್ತೂರು ಪೂರ್ವದ ಅಧ್ಯಕ್ಷರಾದ ಪುರಂದರ ರೈ ಅಧ್ಯಕ್ಷತೆ ವಹಿಸಿ ಅಥಿತಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮುಳಿಯ ಜುವೆಲ್ಲರ್ಸ್ ನ ಮ್ಯಾನೇಜಿಂಗ್ ಟ್ರಸ್ಟಿ ರೋ ಕೃಷ್ಣಪ್ರಸಾದ್ ಮುಳಿಯ ಹಾಗೂ ರೋಟರಾಕ್ಟ್ ಕ್ಲಬ್ ತಿಂಗಳಾಡಿ ಇದರ ಅಧ್ಯಕ್ಷರಾದ ಅನೀಶ್ ಶೆಟ್ಟಿ, ರೋಟರಿ ಕ್ಲಬ್ ಪುತ್ತೂರು ಪೂರ್ವದ ಕಮ್ಯೂನಿಟಿ ಡೈರೆಕ್ಟರ್ ಸಚ್ಚಿದಾನಂದ,ರೋಟರಿ ಕ್ಲಬ್ ಪುತ್ತೂರು ಪೂರ್ವದ ಕಾರ್ಯದರ್ಶಿ ಶಶಿಧರ್ ಕಿನ್ನಿಮಜಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೋಟರಾಕ್ಟ್ ಕ್ಲಬ್ ತಿಂಗಳಾಡಿ ಸದಸ್ಯ ಅರುಣ್ ಪ್ರಾರ್ಥಿಸಿದರು ರೋಟರಾಕ್ಟ್ ಕ್ಲಬ್ ತಿಂಗಳಾಡಿಯ ಅಧ್ಯಕ್ಷ ಅನಿಶ್ ಶೆಟ್ಟಿ ವಂದಿಸಿದರು. ರೋಟರಿ ಕ್ಲಬ್ ಪುತ್ತೂರು ಪೂರ್ವದ ಮಾಜಿ ಕಾರ್ಯದರ್ಶಿ ರವಿಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.