HomePage_Banner
HomePage_Banner
HomePage_Banner
HomePage_Banner

ಫಿಲೋಮಿನಾ ಗಣಪನಿಗೆ 39 ರ ಸಂಭ್ರಮ-ಏಕದಿನದ ಗಣೇಶೋತ್ಸವ ಸರಕಾರದ ಮಾರ್ಗಸೂಚಿಯಂತೆ ಈ ಬಾರಿ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಹಾಗೂ ಸಂತ ಫಿಲೋಮಿನಾ ವಿದ್ಯಾರ್ಥಿ ಗಣೇಶೋತ್ಸವ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಕೋವಿಡ್ ಕಟ್ಟುನಿಟ್ಟಿನ ನಿಯಮದೊಂದಿಗೆ ಒಂದು ದಿನದ ಧಾರ್ಮಿಕ ಕಾರ್ಯಕ್ರಮ 39 ನೇ ವರ್ಷದ ಗಣೇಶೋತ್ಸವವು ಸರಳ ರೀತಿಯಲ್ಲಿ ದರ್ಬೆ ವಿನಾಯಕ ನಗರದಲ್ಲಿ ಸೆ.10  ರಂದು ಜರಗಿತು.


ಬೆಳಿಗ್ಗೆ ಶ್ರೀ ಗಣೇಶನ ವಿಗ್ರಹವನ್ನು ಪರ್ಲಡ್ಕದಿಂದ ತಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೀಪ ಬೆಳಗಿಸಿ ಬಳಿಕ ದರ್ಬೆ ವಿನಾಯಕ ಮಂಟಪದಲ್ಲಿ ಶ್ರೀ ಗಣೇಶನ ವಿಗ್ರಹವನ್ನು ಪ್ರತಿಷ್ಟಾಪನೆಗೊಳಿಸಲಾಯಿತು. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಪ್ರೀತಂ ಪುತ್ತೂರಾಯರವರಿಂದ ಮಧ್ಯಾಹ್ನ ಮಹಾಪೂಜೆ ಧಾರ್ಮಿಕ ಕಾರ್ಯಕ್ರಮ ನೆರವೇರಿತು. ಸಂಜೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯ ಕೆರೆಯಲ್ಲಿ ಶ್ರೀ ಗಣಪನ ವಿಗ್ರಹ ವಿಸರ್ಜನೆಗೊಳಿಸಲಾಯಿತು. ಸಂತ ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಮುಕ್ರಂಪಾಡಿ, ಕಾರ್ಯದರ್ಶಿ ಬೆಟ್ಟ ನಾಗರಾಜ, ಕೋಶಾಧಿಕಾರಿ ದುರ್ಗಾಪ್ರಸಾದ್, ಟ್ರಸ್ಟಿಗಳಾದ ಡಾ.ಅಶೋಕ್ ಕುಮಾರ್ ರೈ, ಮಂಜುನಾಥ್ ಡಿ, ಅನಂತಪದ್ಮನಾಭ, ವಿಶ್ವಾಸ್ ಶೆಣೈ, ಶ್ರೀಧರ್ ಹೆಗ್ಡೆ, ಜನಾರ್ದನ ಎಸ್.ಭಟ್, ವೆಂಕಟಕೃಷ್ಣ ಎಂ.ಎನ್, ದಿನೇಶ್ ಪ್ರಸನ್ನ, ನಾಗೇಶ್ ಪೈ, ಶಿವಪ್ರಸಾದ್, ದೇಲಂತಿಮಾರ್ ನಿತ್ಯಾನಂದ ಶೆಟ್ಟಿ, ವೇಣುಗೋಪಾಲ್ ಪಿ.ಎಚ್, ಹರಿಣಿ ಪುತ್ತೂರಾಯ ಹಾಗೂ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.