HomePage_Banner
HomePage_Banner
HomePage_Banner
HomePage_Banner

ಬೂತ್‌ಮಟ್ಟದಲ್ಲಿ ಪಕ್ಷವನ್ನು ಬಲಿಷ್ಠಗೊಳಿಸುವ ಕಾರ್ಯ ನಿರಂತರವಾಗಿರಲಿ: ಕುಂಬ್ರ ದುರ್ಗಾಪ್ರಸಾದ್ ರೈ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

         ಒಳಮೊಗ್ರು ಬೂತ್ 159 ರ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ಒಳಮೊಗ್ರು ಬೂತ್ 159  ರ ಕಾರ್ಯಕರ್ತರ ಸಭೆಯು ಒಳಮೊಗ್ರು ಗ್ರಾಪಂ ಉಪಾಧ್ಯಕ್ಷೆ ಸುಂದರಿಯವರ ನಿವಾಸದಲ್ಲಿ ಸೆ.12  ರಂದು ನಡೆಯಿತು. ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷತೆ ವಹಿಸಿದ್ದರು.
ಬ್ಲಾಕ್ ಕಾಂಗ್ರೆಸ್ ಮುಖಂಡ ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಮತನಾಡಿ ಪಕ್ಷ ಸಂಘಟನೆಯ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ನೀಡಿದರು. ಪಕ್ಷದ ಅಭಿವೃದ್ದಿಗೆ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಸಕ್ರೀಯರಾಗಿ ಕೆಲಸ ನಿರ್ವಹಿಸಬೇಕಿದೆ. ಪಕ್ಷದಲ್ಲಿ ಎಷ್ಟೇ ದೊಡ್ಡ ವ್ಯಕ್ತಿಯಾದರೂ ಬೂತ್ ಮಟ್ಟದಲ್ಲಿ ಅವರು ಕಾರ್ಯಕರ್ತರೇ ಆಗಿರುತ್ತಾರೆ. ಗ್ರಾಮದ ಪ್ರತೀ ಬೂತ್‌ಗಳಲ್ಲಿ ಕಾರ್ಯಕರ್ತರು ಪಕ್ಷ ಸಂಘಟನೆಯತ್ತ ಮುತುವರ್ಜಿವಹಿಸಬೇಕು. ಮುಂದಿನ ತಾಪಂ , ಜಿಪಂ, ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರತೀ ಕಾರ್ಯಕರ್ತರೂ ಈಗಿಂದೀಗಲೇ ಕಾರ್ಯಪೃವೃತ್ತರಾಗಬೇಕು ಎಂದು ಹೇಳಿದರು.


ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್‌ಪೂಜಾರಿ ಬೊಳ್ಳಾಡಿ ಮಾತನಾಡಿ ಬೂತ್ ಮಟ್ಟದಲ್ಲಿ ಹೊಸ ಸಮಿತಿಯನ್ನು ಈಗಾಗಲೇ ರಚಿಸುವ ಮೂಲಕ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸಗಳು ನಡೆಯುತ್ತಿದೆ. ಬ್ಲಾಕ್ ಕಾಂಗ್ರೆಸ್ ನಾಯಕರ ಸೂಚನೆಯಂತೆ ಗ್ರಾಮದ ಎಲ್ಲಾ ಬೂತ್‌ಗಳಲ್ಲಿಯೂ ಹೊಸ ಸಮಿತಿಯನ್ನು ರಚನೆ ಮಾಡಲಾಗಿದೆ. ಎಲ್ಲಾ ಕಾರ್ಯಕರ್ತರನ್ನು ಪರಿಗಣಿಸಿ ಈಗಾಗಲೇ ನಾಲ್ಕು ಸಮಿತಿಗಳನ್ನು ರಚನೆ ಮಾಡಲಾಗಿದೆ. ಎಲ್ಲರೂ ಪಕ್ಷ ಸಂಘಟನೆಯಲ್ಲಿ ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಒಳಮೊಗ್ರು ಗ್ರಾಪಂ ಸದಸ್ಯರುಗಳಾದ ಶೀನಪ್ಪ ನಾಯ್ಕ್, ಅಶ್ರಫ್ ಉಜಿರೋಡಿ,ಬಿ ಸಿ ಚಿತ್ರಾ, ವಿನೋದ್ ಶೆಟ್ಟಿ ಮುಡಾಲ,ಜಯಶ್ರೀ ಪರ್ಪುಂಜ, ಮುದರು, ಲೀಲಾ ಪರ್ಪುಂಜ, ವಿಶ್ವನಾಥ ಪರ್ಪುಂಜ, ಮಮ್ಮುಂಞಿ ಪರ್ಪುಂಜ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ೧೫೯ ಹೊಸ ಬೂತ್ ಸಮಿತಿಯನ್ನು ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಒಳಮೊಗ್ರು ಗ್ರಾಪಂ ಉಪಾಧ್ಯಕ್ಷೆ ಸುಂದರಿ, ಉಪಾಧ್ಯಕ್ಷರಾಗಿ ವಿಶ್ವನಾಥ ಪರ್ಪುಂಜ, ಕಾರ್ಯದರ್ಶಿಯಾಗಿ ರಝಾಕ್ ಪರ್ಪುಂಜ ಆಯ್ಕೆ ಮಾಡಲಾಯಿತು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.