HomePage_Banner
HomePage_Banner
HomePage_Banner
HomePage_Banner

ಅರಿಯಡ್ಕ ಗ್ರಾ.ಪಂ. ಜಮಾಬಂದಿ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಅರಿಯಡ್ಕ : ಅರಿಯಡ್ಕ ಗ್ರಾಮ ಪಂಚಾಯತ್‌ನ 2020-21 ನೇ ಸಾಲಿನ ಜಮಾಬಂದಿ ಪಂಚಾಯತ್ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯಮ್ ರವರ ಅಧ್ಯಕ್ಷತೆಯಲ್ಲಿ ಸೆ.13 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಜಮಾಬಂದಿ ಅಧಿಕಾರಿಯಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶ್ರೀಲತಾ ಎಸ್.ಎಸ್ ಮಾತನಾಡಿ, ಪಂಚಾಯತಿನಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಉದ್ಯೋಗ ಖಾತ್ರಿಯಲ್ಲಿ ಕೂಡ ಉತ್ತಮ ಫಲಿತಾಂಶ ಇದೆ. ಕೆಲಸದಲ್ಲಿ ಪಾರದರ್ಶಕತೆ ಇದ್ದಾಗ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಿಗುತ್ತದೆ. ಜನ ಪ್ರಶ್ನೆ ಮಾಡಿದಾಗ ಮಾತ್ರ ಕೆಲಸಗಳು ಸಮರ್ಪಕ ರೀತಿಯಲ್ಲಿ ನಡೆಯಲು ಸಾಧ್ಯವಾಗುತ್ತದೆ. ಸದ್ದು ಗದ್ದಲ ಇಲ್ಲದೆ ಶಾಂತ ರೀತಿಯಲ್ಲಿ ಇಂದಿನ ಕಾರ್ಯಕ್ರಮ ನಡೆದಿದೆ. ಇದು ಉತ್ತಮ ಬೆಳವಣಿಗೆ ಎಂದು ಹೇಳಿದರು. ಪಂಚಾಯತ್ ಉಪಾಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ ಮಾತನಾ ಪಂಚಾಯತ್ ಸದಸ್ಯರಿಂದ ಉತ್ತಮ ಸ್ಪಂದನೆ ದೊರೆಯುತ್ತೀರುವುದರಿಂದ ವಾರ್ಡ್‌ಗಳಲ್ಲಿ ಯಾವುದೇ ಸಮಸ್ಯೆಗಳು ಬಂದಿಲ್ಲ. ಅವರ ಸೇವೆ ಶ್ಲಾಘನೀಯ ಎಂದರು.



ಪಂಚಾಯತ್ ಸದಸ್ಯರಾದ ಲೋಕೇಶ್ ಚಾಕೋಟೆ, ಪುಷ್ಪಲತಾ ಮರತ್ತಮೂಲೆ, ಭಾರತಿ ವಸಂತ್ ಕೌಡಿಚ್ಚಾರು, ಮೀನಾಕ್ಷಿ ಪಾಪೆಮಜಲು, ಜಯಂತಿ ಪಟ್ಟುಮೂಲೆ, ಹರೀಶ್ ರೈ ಜಾರತ್ತಾರು, ರಾಜೇಶ್ ಮಣಿಯಾಣಿ ತ್ಯಾಗ ರಾಜೆ, ರೇಣುಕಾ ಕರ್ಕೆರಾ ಮಡ್ಯಂಗಳ, ಸಾವಿತ್ರಿ ಪೊನ್ನೆತ್ತಳ್ಕ, ಅನಿತಾ ಆಚಾರಿ ಮೂಲೆ,, ಪ್ರವೀಣ ಅಮ್ಚಿನಡ್ಕ, ಮತ್ತು ವಿನುತಾ ಬಳ್ಳಿಕಾನ, ಅರಿಯಡ್ಕ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷ ಲೋಕೇಶ್ ರೈ ಅಮೈ, ಸಾರ್ವಜನಿಕರು, ಪಂಚಾಯತ್ ಸಿಬ್ಬಂದಿಗಳು, ಉಪಸ್ಥಿತರಿದ್ದರು. ಪಂಚಾಯತ್ ಪಿ.ಡಿ.ಓ ಪದ್ಮ ಕುಮಾರಿ ಸ್ವಾಗತಿಸಿ, ಕಾರ್ಯದರ್ಶಿ ಶಿವರಾಮ ಮೂಲ್ಯ, ವರದಿ ವಾಚಿಸಿ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.