HomePage_Banner
HomePage_Banner
HomePage_Banner
HomePage_Banner

ಗ್ರಾಹಕರ ಸೋಗಿನಲ್ಲಿ ಬಂದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು 

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು ನಗರ ಪೊಲೀಸ್ ಠಾಣೆ ನಿರೀಕ್ಷಕ ಗೋಪಾಲ್ ನಾಯ್ಕ್ ನೇತೃತ್ವದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳ ಬಂಧನ

ಪುತ್ತೂರು: ಚಿನ್ನಾಭರಣ ಖರೀದಿಸುವ ಗ್ರಾಹಕರ ಸೋಗಿನಲ್ಲಿ ಪುತ್ತೂರು ಹಿಂದೂಸ್ತಾನ್ ಕಮರ್ಶಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಜೋಸ್ ಆಲುಕ್ಕಾಸ್ ಗೆ ಬಂದ ಮೂವರು ಮಹಿಳೆಯರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

 

 

ದಾವಣಗೆರೆ ಜಿಲ್ಲೆ ನಿವಾಸಿಗಳಾದ ಬೀಬಿಜಾನ್ , ಹುಸೇನ್ ಬಿ , ಜೈತುಂಬಿ ಬಂಧಿತ ಆರೋಪಿಗಳು. ಇವರು ಸೆ.೧ ರಂದು ಜೋಸ್ ಅಲುಕಾಸ್ ಗೆ ಗ್ರಾಹಕರ ಸೋಗಿನಲ್ಲಿ ಬಂದು 3.065 ಗ್ರಾಂ ತೂಕದ 13,400/- ರೂ ಮೌಲ್ಯದ ಚಿನ್ನವನ್ನು ಇರಿಸಿ ಆರೋಪಿಗಳು ಸುಳ್ಳು ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿ ಚಿನ್ನದ ಅಂಗಡಿಗೆ ಸುಮಾರು 50.242 ಗ್ರಾಂ ತೂಕದ 2,60,400/- ಮೌಲ್ಯದ ಕಿವಿಯ ಚಿನ್ನಾಭರಣವನ್ನು ಕಳವು ಮಾಡಿಕೊಂಡು ಹೋಗಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಜೋಸ್ ಅಲುಕ್ಕಾಸ್ ಜ್ಯುವೆಲ್ಲರಿ ಮ್ಯಾನೇಜರ್ ರತೀಶ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬೀರಮಲೆ ಗುಡ್ಡೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಕಳವು ಮಾಡಿದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.. ದ.ಕ ಜಿಲ್ಲೆ ಎಸ್ಪಿ ಋಷಿಕೇಶ್ ಭಗವಾನ್ ಸೋನಾವನೆ ಅವರ ನಿರ್ದೇಶನದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ದ.ಕ ಜಿಲ್ಲೆ , ಹಾಗೂ ಪೊಲೀಸ್ ಉಪಾಧೀಕ್ಷಕಿ ಡಾ.ಗಾನ ಪಿ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆ ನಿರೀಕ್ಷಕ ಗೋಪಾಲ್ ನಾಯ್ಕ್ ನೇತೃತ್ವದಲ್ಲಿ ಎಸ್.ಐಗಳಾದ ಸುತೇಶ್ ಕೆ.ಪಿ ನಸ್ರೀನಾ ತಾಜ್ ಚಟ್ಟರಕಿ, ಮಹಿಳಾ ಎ.ಎಸ್.ಐ ಕವಿತಾ , ಹೆಡ್ ಕಾನ್ ಸ್ಟೇಬಲ್ ರಕ್ಷಿತ್ , ರಾಜೇಶ್, ಕಾನ್ ಸ್ಟೇಬಲ್ಗಳಾದ ಕಿರಣ್ , ಆನಂದರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಗಳನ್ನು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.