ಜಾತಿನಿಂದನೆ ಪ್ರಕರಣದ ಆರೋಪಿ ದೋಷ ಮುಕ್ತ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಜಾತಿ ನಿಂದನೆ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕಟ್ಟೆಕಳ ಎಂಬಲ್ಲಿಯ ಚಂದ್ರಾವತಿ ಎಂಬವರು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರಕ್ಕೆ ಹೋಗಿದ್ದಾರೆ ಎಂಬ ದ್ವೇಷದಲ್ಲಿ ಆಲೆಟ್ಟಿ ಗ್ರಾಮದ ಬಿಜೆಪಿ ಕಾರ್ಯಕರ್ತ ಜಯಪ್ರಕಾಶ್ ಕುಂಚಡ್ಕ ಎಂಬವರು ಅವರ ಮನೆ ಅಂಗಳಕ್ಕೆ ಹೋಗಿ ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು.ಈ ಸಂಬಂಧ ಫೆ.28, 2016ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.ಪುತ್ತೂರಿನ ಆಗಿನ ಸಹಾಯಕ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ.ರವರು ಪ್ರಕರಣದ ತನಿಖೆಯನ್ನು ಮಾಡಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಆರೋಪಿಯ ವಿರುದ್ಧದ ಆರೋಪವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಅಭಿಪ್ರಾಯಿಸಿ ಆರೋಪಿ ಜಯಪ್ರಕಾಶ್‌ರವರನ್ನು ದೋಷಮುಕ್ತಗೊಳಿಸಿ ಬಿಡುಗಡೆಗೊಳಿಸಿ ಆದೇಶಿಸಿದೆ. ಆರೋಪಿ ಪರ ಪುತ್ತೂರಿನ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು ವಾದಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.