ಮುತ್ತಿನನಗರಿಗೆ ಕ್ರಿಸ್ಟೋಫರ್ ಸಮೂಹ ಸಂಸ್ಥೆಗಳ ಮತ್ತೊಂದು ಕೊಡುಗೆ | ಸುಸಜ್ಜಿತ ಸೆ.15ರಂದು ಕ್ರಿಸ್ಟೋಫರ್ ಫಿಟ್ನೆಸ್ ಸೆಂಟರ್ ಶುಭಾರಂಭ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರಿನ ಫಿಟ್‌ನೆಸ್ ಇತಿಹಾಸದಲ್ಲಿ ಬೃಹತ್ ಜಿಮ್ ಎನ್ನುವ ಹೆಗ್ಗಳಿಕೆಯೊಂದಿಗೆ ಮುತ್ತಿನನಗರಿ ಪುತ್ತೂರಿಗೆ ಎ.ಪಿ.ಎಂ.ಸಿ ರಸ್ತೆಯಲ್ಲಿನ ಕ್ರಿಸ್ಟೋಫರ್ ಸಮೂಹ ಸಂಸ್ಥೆಗಳ ಮತ್ತೊಂದು ಕೊಡುಗೆಯಾಗಿ ಪುರುಷರ ಹಾಗೂ ಮಹಿಳೆಯರ ಪ್ರತ್ಯೇಕ ಸುಸಜ್ಜಿತ ಜಿಮ್‌ವನ್ನೊಳಗೊಂಡ `ಕ್ರಿಸ್ಟೋಫರ್ ಫಿಟ್ನೆಸ್ ಸೆಂಟರ್’ ಸೆ.15ರಂದು ಪುತ್ತೂರು ಸಿಟಿ ಆಸ್ಪತ್ರೆ ಬಳಿಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್‌ರವರು ಸುಸಜ್ಜಿತ ಜಿಮ್‌ನ್ನು ಉದ್ಘಾಟಿಸಲಿದ್ದಾರೆ. ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ವಂ|ಡಾ|ಆಂಟನಿ ಪ್ರಕಾಶ್ ಮೊಂತೇರೋರವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ, ಅತಿಥಿಗಳಾಗಿ ಮಿಸ್ಟರ್ ಕರ್ನಾಟಕ `ಉದಯ’ ರವಿ ಕುಲಾಲ್, ಟಸ್ಟರ್ ಪೂಲ್ಸ್ ಆಂಡ್ ಫಿಟ್ನೆಸ್‌ನ ಮಾಲಕ ನವೀನ್ ಕುಲಾಲ್‌ರವರು ಭಾಗವಹಿಸಲಿದ್ದಾರೆ ಎಂದು ಕ್ರಿಸ್ಟೋಫರ್ ಸಮೂಹ ಸಂಸ್ಥೆಗಳ ಎಂ.ಡಿ ವಲೇರಿಯನ್ ಡಾಯಸ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶುಭಾರಂಭದ ಪ್ರಯುಕ್ತ ವಿಶೇಷ ಆಫರ್…
ಶುಭಾರಂಭದ ಪ್ರಯುಕ್ತ ಸಂಸ್ಥೆಯು ವಿಶೇಷ ಆಫರ್‌ಗಳನ್ನು ಗ್ರಾಹಕರಿಗೆ ಪರಿಚಯಿಸುತ್ತಿದ್ದು, ಮೊದಲು ಹೆಸರನ್ನು ನೋಂದಾಯಿಸಿದ 100 ಮಂದಿ ಪುರುಷರಿಗೆ, 50 ಮಂದಿ ಮಹಿಳೆಯರಿಗೆ ಹಾಗೂ ೨೫ ಮಂದಿ ಜೋಡಿ ದಂಪತಿಗಳಿಗೆ ಈ ವಿಶೇಷ ಆಫರ್ ಲಭ್ಯವಾಗುತ್ತದೆ. ಹೆಚ್ಚಿನ ಮಾಹಿತಿಗೆ 9535627247 ನಂಬರಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.