ವಿಹಿಂಪ, ಜನ್ಮ ಪೌಂಡೇಷನ್ ಟ್ರಸ್ಟ್‌ನಿಂದ ಆಯೋಜಿಸಲಾದ ಶ್ರೀಕೃಷ್ಣ ವೇಷ, ಭಕ್ತಿ ಗಾಯನ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪ್ರದಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ವಿಶ್ವಹಿಂದು ಪರಿಷದ್ ಪುತ್ತೂರು ಜಿಲ್ಲೆ ನೇತೃತ್ವದಲ್ಲಿ ಜನ್ಮ ಪೌಂಡೇಷನ್ ಟ್ರಸ್ಟ್ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಶ್ರೀ ಕೃಷ್ಣ ವೇಷ ಸ್ಪರ್ಧೆ ಮತ್ತು ಭಕ್ತಿ ಗಾಯನ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸೆ.೧೪ರಂದು ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಿತು.

ಬಹುಮಾನ ವಿತರಣೆಯ ಆರಂಭದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ವಿಶ್ವ ಹಿಂದೂ ಪರಿಷದ್ ಪ್ರಾಂತ ಕಾರ್ಯಾಧ್ಯಕ್ಷ ಎಂ.ಜಿ.ಪುರಾಣಿಕ್ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿದರು.

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ ಕತ್ತಲ್‌ಸಾರ್, ಅನಿವಾಸಿ ಉದ್ಯಮಿ ಮಿತ್ರಂಪಾಡಿ ಜಯರಾಮ ರೈ, ವಿಶ್ವ ಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ವಿಶ್ವಹಿಂದು ಪರಿಷದ್ ಕರ್ನಾಟಕ‌ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಯು ಪೂವಪ್ಪ, ಬಜರಂಗದಳ ನೂತನ ಜಿಲ್ಲಾ ಸಂಚಾಲಕ ಭರತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವಿವಿಧ ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ಉಮೇಶ್ ನಾಯಕ್ ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ಜನ್ಮ ಪೌಂಡೇಷನ್ ಟ್ರಸ್ಟ್‌ನ ಅಧ್ಯಕ್ಷ ಡಾ| ಹರ್ಷ ಕುಮಾರ್ ರೈ ಮಾಡಾವು,ಜನಾರ್ದನ ಬೆಟ್ಟ, ವಿಶ್ವಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ ಎಸ್, ಶೇಷಪ್ಪ ಬೆಳ್ಳಿಪ್ಪಾಡಿ, ಬಜರಂಗದಳ ಜಿಲ್ಲಾ ಸಂಚಾಲಕ ಶ್ರೀಧರ್ ತೆಂಕಿಲ, ಹರೀಶ್ ದೋಳ್ಪಾಡಿ ಅತಿಥಿಗಳನ್ನು ಗೌರವಿಸಿದರು. ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ ಅಧ್ಯಕ್ಷ ಡಾ. ಕೃಷ್ಣಪ್ರಸನ್ನ ಸ್ವಾಗತಿಸಿದರು. ವಿಶಾಖ್ ರೈ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.