ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ದೈನಂದಿನ ನೀಟ್, ಜೆಇಇ, ಸಿಇಟಿ ತರಗತಿಗಳ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನೀಟ್, ಜೆಇಇ, ಸಿಇಟಿ ತರಗತಿಗಳ ಉದ್ಘಾಟನೆಯನ್ನು ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಹೆಚ್.ಕೆ.ಪ್ರಕಾಶ್ ಇವರು ನೆರವೇರಿಸಿದರು. ನಂತರ ಅವರು ತಮ್ಮ ತರಬೇತಿಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ವಿಜ್ಞಾನ ವಿಭಾಗದಲ್ಲಿರುವ ವಿವಿಧ ಅವಕಾಶಗಳ ಬಗ್ಗೆ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.


ಸಭೆಯ ಅಧ್ಯಕ್ಷೆಯನ್ನು ವಹಿಸಿದ್ದ, ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ ಕೆ ಇವರು ಅಧ್ಯಕ್ಷೀಯ ಮಾತುಗಳನ್ನಾಡುತ್ತಾ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಭೌತಶಾಸ್ತ್ರ ಉಪನ್ಯಾಸಕರಾದ ಶ್ರೀ ಸುಬ್ರಹ್ಮಣ್ಯ ಕಾರಂತ್ ಇವರು ಗಣ್ಯರನ್ನು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ನೀಟ್, ಜೆಇಇ, ಸಿಇಟಿ ತರಗತಿಗಳ ಸಂಯೋಜಕರಾದ, ರಸಾಯನಶಾಸ್ತ್ರ ಉಪನ್ಯಾಸಕರಾದ ಶ್ರೀ ವಿಶ್ವೇಶ್ವರ ಎಂ ಇವರು ಕಾರ್ಯಕ್ರಮ ನಿರೂಪಿಸಿದರು ಮತ್ತು ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.