HomePage_Banner
HomePage_Banner
HomePage_Banner
HomePage_Banner

ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕ: ದೀಕ್ಷಿತ್ ಕುಮಾರ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 


ಬೆಟ್ಟಂಪಾಡಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ – 2020ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದ್ದು, ಗುಣಮಟ್ಟದ ಶಿಕ್ಷಣವು ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ ಎಂಬುದಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ದೀಕ್ಷಿತ್ ಕುಮಾರ್ ಹೇಳಿದರು. ಅವರು ದಿನಾಂಕ 14/09/2021 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ನಡೆದ NEP – 2020 ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಹಿರಿಯ ಸದಸ್ಯರಾದ ಮಂಜುಳಗಿರಿ ವೆಂಕಟ್ರಮಣ ಭಟ್ ಉಪಸ್ಥಿತರಿದ್ದು ನೂತನ ಶಿಕ್ಷಣ ನೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.



ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿಯವರು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ NEP ಸಂಚಾಲಕರಾದ ಡಾ. ದೇವರಾಜ ಆರ್ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಗ್ರಂಥಪಾಲಕರಾದ ಶ್ರೀ ರಾಮ ಕೆ ಧನ್ಯವಾದ ಸಮರ್ಪಿಸಿದರು. ರಾಜ್ಯಶಾಸ್ತ್ರ ವಿಭಾದ ಮುಖ್ಯಸ್ಥರಾದ ಪ್ರೊ. ದಾಮೋದರ ಕಣಜಾಲು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವೃಂದ, ಪೋಷಕ ವೃಂದ ಮತ್ತು ನೂತನವಾಗಿ 2021-22ನೇ ಸಾಲಿಗೆ ದಾಖಲಾತಿಗೊಂಡ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.