HomePage_Banner
HomePage_Banner
HomePage_Banner
HomePage_Banner

ಮೊಟ್ಟೆತ್ತಡ್ಕ-ಮಣ್ಣಾಪು ಕೊರಗಜ್ಜ, ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಗಣಹೋಮ, ಬೊಂಡಾಭಿಷೇಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ-ಮಣ್ಣಾಪು ಶ್ರೀ ಕೊರಗಜ್ಜ ಮತ್ತು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಸೆ.೧೫ ರಂದು ಬೆಳಿಗ್ಗೆ ಗಣಹೋಮ ಹಾಗೂ ಕೊರಗಜ್ಜನಿಗೆ ಬೊಂಡಾಭಿಷೇಕ ಕಾರ್ಯಕ್ರಮ ಜರಗಿತು. ಅರ್ಚಕರಾದ ಕೃಷ್ಣ ಭಟ್‌ರವರ ನೇತೃತ್ವದಲ್ಲಿ ಶ್ರೀ ಕ್ಷೇತ್ರದ ಮಧ್ಯಸ್ತ ಗಣೇಶ್ ಪೂಜಾರಿ ಕೆಮ್ಮಿಂಜೆ, ದೈವದ ಪ್ರಧಾನ ಅರ್ಚಕ ಕುಂಡ ಮಣ್ಣಾಪು, ಅಣ್ಣು ಮಣ್ಣಾಪು, ದೈವ ನರ್ತಕರು ಹರೀಶ್ ಕೇಪುರವರ ಸಹಕಾರದಲ್ಲಿ ಗಣಹೋಮ ಹಾಗೂ ಕೊರಗಜ್ಜನಿಗೆ ಬೊಂಡಾಭಿಷೇಕವು ಶ್ರದ್ಧಾಭಕ್ತಿಯಿಂದ ಜರಗಿತು. ಶ್ರೀ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು, ಅಧ್ಯಕ್ಷ ವಿಶ್ವನಾಥ್ ಮಣ್ಣಾಪುರ, ಉಪಾಧ್ಯಕ್ಷ ವಿಶ್ವನಾಥ್ ಪೂಜಾರಿ ಮೊಟ್ಟೆತ್ತಡ್ಕ, ಕಾರ್ಯದರ್ಶಿ ದಿನೇಶ್ ಎಂ.ಕೆಮ್ಮಿಂಜೆ, ಸಹ-ಕಾರ್ಯದರ್ಶಿ ವಿಶ್ವನಾಥ್ ನಾಯ್ಕ ಅಮ್ಮುಂಜ, ಗೌರವ ಸಲಹೆಗಾರ ಗಂಗಾಧರ ಮಣ್ಣಾಪು, ರಾಧಾಕೃಷ್ಣ ಆಚಾರ್ಯ ಸಹಿತ ಶ್ರೀ ಕ್ಷೇತ್ರದ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಧ್ಯಾಹ್ನ ಆಗಮಿಸಿದ ಭಕ್ತರಿಗೆ ಭೋಜನವನ್ನು ಏರ್ಪಡಿಸಲಾಗಿತ್ತು.




ಸೆ.16 ರಂದು ಶ್ರೀ ಕ್ಷೇತ್ರದಲ್ಲಿ ಸಂಕ್ರಮಣದ ಪ್ರಯುಕ್ತ ಅಗೇಲು ಸೇವೆ ನಡೆಯಲಿರುವುದು. ಪ್ರತೀ ಸಂಕ್ರಮಣದಂದು ಶ್ರೀ ಕ್ಷೇತ್ರದಲ್ಲಿ ಅಗೇಲು ಸೇವೆ(ಅಗೇಲು ಬಾಬ್ತು ರೂ1200) ನಡೆಯಲಿದ್ದು, ಆದಿತ್ಯವಾರ, ಮಂಗಳವಾರ, ಶುಕ್ರವಾರ ಭಕ್ತಾಧಿಗಳಿಗೆ ಪ್ರಾರ್ಥನೆ ಸಲ್ಲಿಸಲು ಶ್ರೀ ಕ್ಷೇತ್ರದಲ್ಲಿ ಅವಕಾಶವಿದೆ. ಅಗೇಲು ಸೇವೆ ನೀಡುವ ಭಕ್ತಾಧಿಗಳು ಎರಡು ದಿನ ಮುಂಚಿತವಾಗಿ ತಿಳಿಸತಕ್ಕದ್ದು ಎಂದು ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.