HomePage_Banner
HomePage_Banner
HomePage_Banner
HomePage_Banner

ಕುದ್ಮಾರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಯಲ್ಲಿ ನಾಮಫಲಕ ಅನಾವರಣ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದಾಗ ಜನತೆ ಕೈಬಿಡುವುದಿಲ್ಲ- ಎಸ್. ಅಂಗಾರ
ಕಾಣಿಯೂರು: ಬಿಜೆಪಿ ಪಕ್ಷವು ಹಿರಿಯರ ಶ್ರಮದಿಂದಾಗಿ ಇಂದು ಬೆಳೆದಿದೆ. ಗುರೂಜಿ, ಶ್ಯಾಮ್‌ಪ್ರಕಾಶ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ, ಜನಸಂಘದ ಹಿರಿಯ ತ್ಯಾಗದ ಫಲವಾಗಿ ನಾವಿಂದು ಅಽಕಾರ ಅನುಭವಿಸುವಂತಾಗಿದೆ. ಪಕ್ಷವನ್ನು ಬೆಳೆಸಿದ ಹಿರಿಯರನ್ನು ನಾವು ಮರೆಯಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು. ಅವರು ಬೆಳಂದೂರು ಗ್ರಾ.ಪಂ.ವ್ಯಾಪ್ತಿಯ ಕುದ್ಮಾರು ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷ ಸತೀಶ್ ಹೊಸೊಕ್ಲು ಅವರ ಮನೆಯಲ್ಲಿ ನಾಮಫಲಕ ಅಳವಡಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಣೆ ಮಾಡಿದಾಗ ಜನತೆ ಕೈಬಿಡುವುದಿಲ್ಲ. ಕೇಂದ್ರ ಹಾಗೂ ರಾಜ್ಯ ಸರಕಾರದ ಹಲವು ಯೋಜನೆಗಳನ್ನು ಜನತೆಗೆ ತಲುಪಿಸುವ ಕಾರ್ಯ ಪ್ರತಿ ಗ್ರಾಮ ಪಂಚಾಯತ್, ಬೂತ್ ಮಟ್ಟದಲ್ಲಿ ಮಾಡಬೇಕಾಗಿದೆ ಎಂದರು. ವೇದಿಕೆಯಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಸುಭೋದ್ ಶೆಟ್ಟಿ ಮೇನಾಲ, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಬೆಳಂದೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ, ಕುದ್ಮಾರು ಬೂತ್ ಸಮಿತಿ ಅಧ್ಯಕ್ಷ ಸತೀಶ್ ಹೊಸೊಕ್ಲು, ಜಿಲ್ಲಾ ಸಮಿತಿ ಸದಸ್ಯೆ ಪುಷ್ಪಾವತಿ ಕಳುವಾಜೆ, ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ, ಬಿಜೆಪಿ ಬೆಳಂದೂರು ಶಕ್ತಿ ಕೇಂದ್ರದ ಪ್ರಮುಖ್ ಮೋಹನ್ ಅಗಳಿ ಹಾಗೂ ಗ್ರಾ.ಪಂ. ಸದಸ್ಯರು, ಸಿ.ಎ ಬ್ಯಾಂಕ್ ನಿರ್ದೇಶಕರು, ವಿವಿಧ ಬೂತ್ ಸಮಿತಿಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ತಾ.ಪಂ. ಮಾಜಿ ಸದಸ್ಯೆ ಲಲಿತಾ ಈಶ್ವರ ಸ್ವಾಗತಿಸಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ನಿರ್ಮಲ ಕೇಶವ ಅಮೈ ವಂದಿಸಿದರು.


Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.