HomePage_Banner
HomePage_Banner
HomePage_Banner
HomePage_Banner

ಸರ್.ಎಂ.ವಿಶ್ವೇಶ್ವರಯ್ಯನವರು ಕಲಿಸಿಕೊಟ್ಟ ಶ್ರಮ ಮತ್ತು ಪ್ರಾಮಾಣಿಕತೆಯ ಪಾಠವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು – ರವಿಕೃಷ್ಣ.ಡಿ.ಕಲ್ಲಾಜೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನಮ್ಮ ನಾಡಿನ ಹೆಮ್ಮೆಯ ಪುತ್ರ ಸರ್.ಎಂ.ವಿಶ್ವೇಶ್ವರಯ್ಯನವರು ಕಲಿಸಿಕೊಟ್ಟ ಶ್ರಮ ಮತ್ತು ಪ್ರಾಮಾಣಿಕತೆಯ ಪಾಠವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ತನ್ಮೂಲಕ ದೇಶದ ಅಭಿವೃದ್ಧಿಯಲ್ಲಿ ತಮ್ಮ ಕೊಡುಗೆಯನ್ನು ನೀಡಬೇಕು ಎಂದು ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗ, ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಸಂಘ ಮತ್ತು ಕಾಲೇಜಿನ ಐಕ್ಯುಎಸಿ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ ಆಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತಾಡಿದರು. ಸರ್.ಎಂ.ವಿಯವರ ಸಾಧನೆ ಈ ಭೂಮಿ ಇರುವವರೆಗೆ ಶಾಶ್ವತ. ಇವರ ದೂರದರ್ಶಿತ್ವವುಳ್ಳ ಯೋಚನೆಗಳು ಮತ್ತು ಯೋಜನೆಗಳು ಅವರ ಬುದ್ಧಿವಂತಿಕೆಗೆ ಸಾಕ್ಷಿಯಾಗಿವೆ ಎಂದು ನುಡಿದರು.

ಶುಭ ಹಾರೈಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ ಕೆ. ಅವರು ಅದಮ್ಯ ಚೇತನ, ಕ್ರಮನಿಷ್ಟವಾದ ಜೀವನ ಶೈಲಿ, ದೇಶಕ್ಕಾಗಿ ಕೆಲಸ ಮಾಡುವ ತುಡಿತ ಇವುಗಳಿಂದಾಗಿ ಸರ್.ಎಂ.ವಿಶ್ವೇಶ್ವರಯ್ಯನವರು ದೇಶದ ಇತಿಹಾಸದಲ್ಲಿ ಹೊಸ ಆಯಾಮವನ್ನೇ ಹುಟ್ಟುಹಾಕಿದರು ಎಂದು ಹೇಳಿದರು. ಉತ್ತಮವಾದ ಕಾರ್ಯಯೋಜನೆಯನ್ನು ತಯಾರಿಸಿ ಅದನ್ನು ಸರಿಯಾಗಿ ಅನುಷ್ಠಾನಗೊಳಿಸುವವನು ಮಾತ್ರ ಶ್ರೇಷ್ಟ ಇಂಜಿನಿಯರ್ ಆಗಬಲ್ಲ ಎಂದರು. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸುಬ್ರಮಣ್ಯ ಭಟ್.ಟಿ.ಎಸ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ಪ್ರೊ.ಹರೀಶ್.ಎಸ್.ಆರ್ ಸ್ವಾಗತಿಸಿ ವಂದನಾರ್ಪಣೆಗೈದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.