HomePage_Banner
HomePage_Banner
HomePage_Banner
HomePage_Banner

ನಗರಸಭೆ ವ್ಯಾಪ್ತಿಯಲ್ಲಿ ಮೆಗಾ ಲಸಿಕೆ ಶಿಬಿರಕ್ಕೆ ಕಲ್ಲೇಗದಲ್ಲಿ ಚಾಲನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ನಗರಸಭೆ ವ್ಯಾಪ್ತಿಯಲ್ಲಿ ಶೇ.100 ಲಸಿಕೆ ಮಾಡಿಯೇ ಸಿದ್ಧ – ಕೆ.ಜೀವಂಧರ್ ಜೈನ್

ಪುತ್ತೂರು: ಕೋವಿಡ್ -೧೯ ಸೋಂಕು ನಿಯಂತ್ರಣಕ್ಕಾಗಿ ಪ್ರಧಾನಿ ಮೋದಿಯವರು ಸಂಕಲ್ಪ ತೊಟ್ಟಿದ್ದಾರೆ. ಅದರಂತೆ ಮೆಗಾ ಲಸಿಕೆ ಶಿಬಿರದ ಮೂಲಕ ಉಚಿತ ಲಸಿಕೆಯನ್ನು ನಗರಸಭೆ ವ್ಯಾಪ್ತಿಯಲ್ಲಿ ನೀಡಲಾಗುತ್ತಿದ್ದು, ನಗರಸಭೆಯಲ್ಲಿ ಶೇ.೧೦೦ ಲಸಿಕೆ ಮಾಡಿಯೇ ಸಿದ್ಧ ಎಂದು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಹೇಳಿದರು.

ನಗರಸಭೆ ವ್ಯಾಪ್ತಿಯಲ್ಲಿ ೬ ಕಡೆ ನಡೆಯುವ ಕೋವಿಡ್ ಲಸಿಕೆ ಮೆಗಾ ಶಿಬಿರವನ್ನು ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ಚಾಲನೆ ನೀಡಿ ಮಾತನಾಡಿದರು. ಈಗಾಗಲೇ ನಗರಸಭೆ ವಾರ್ಡ್‌ಗಳಲ್ಲಿ ಎರಡೆರಡು ಬಾರಿ ಲಸಿಕೆ ನೀಡಿಕೆ ಆಗಿದೆ. ಇದೀಗ ಇನ್ನೂ ಕೂಡಾ ಲಸಿಕೆ ಪಡೆಯದವರು ಮೆಗಾ ಶಿಬಿರದ ಸದುಪಯೋಗ ಪಡೆಯಬೇಕು ಮತ್ತು ಮೊಬೈಲ್ ಲಸಿಕೆ ಮೂಲಕ ಸಾರ್ವಜನಿಕರು ಇರುವ ಸ್ಥಳಕ್ಕೆ ಹೋಗಿ ಲಸಿಕೆ ಕೊಡುವ ವ್ಯವಸ್ಥೆಯೂ ಇದೆ ಎಂದರು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ದೀಕ್ಷಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ಪೌರಾಯುಕ್ತ ಮಧು ಎಸ್ ಮನೋಹರ್, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಸದಸ್ಯರಾದ ಶಿವರಾಮ ಸಪಲ್ಯ, ವಸಂತ ಕಾರೆಕ್ಕಾಡು, ನವೀನ್, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ಕಲ್ಲೇಗ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರವಿನೆಲಪ್ಪಾಲು, ಗೋವರ್ಧನ್, ಆರೋಗ್ಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.