HomePage_Banner
HomePage_Banner
HomePage_Banner
HomePage_Banner

ಉದನೆ: ತೂಗುಸೇತುವೆಯಲ್ಲಿ ಬ್ಯಾಗ್, ಚಪ್ಪಲ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  •    ವ್ಯಕ್ತಿ ನದಿಗೆ ಹಾರಿರುವ ಶಂಕೆ ?

ನೆಲ್ಯಾಡಿ: ಉದನೆ ತೂಗುಸೇತುವೆಯಲ್ಲಿ ಪುರುಷರ 1 ಜೊತೆ ಚಪ್ಪಲ್ ಹಾಗೂ ಬ್ಯಾಗ್ ಪತ್ತೆಯಾಗಿದ್ದು ಯಾರೋ ನದಿಗೆ ಹಾರಿರುವ ಶಂಕೆ ವ್ಯಕ್ತಗೊಂಡಿದೆ. ಬೆಳಿಗ್ಗೆ ಇದನ್ನು ಗಮನಿಸಿದವರು ಪೊಲೀಸರಿಗೆ ಮಾಹಿತಿ ನೀಡಿದ್ದು ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಗ್‌ನಲ್ಲಿ ಡ್ರೈವಿಂಗ್ ಲೈಸನ್ಸ್ ಪತ್ತೆಯಾಗಿದ್ದು ಅದರಲ್ಲಿ ರಾಮಣ್ಣ ತಂದೆ ಹೆಸರು: ಸುಬ್ರಹ್ಮಣ್ಯ, ಊರು: ಪುಟ್ಟಪರ್ತಿ ಎಂದಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಂದು ಬರೆದಿದ್ದ ಡೆತ್‌ನೋಟ್ ಸಹ ಪತ್ತೆಯಾಗಿದೆ. ಅಲ್ಲದೇ ಸೆ.15ರಂದು ಧರ್ಮಸ್ಥಳದಿಂದ ಉದನೆಗೆ ಬಸ್ಸಿನಲ್ಲಿ ಪ್ರಯಾಣಿಸಿರುವ ಬಸ್ ಟಿಕೆಟ್ ಸಹ ಪತ್ತೆಯಾಗಿದೆ. ನೆಲ್ಯಾಡಿ ಹೊರಠಾಣೆ ಎಎಸ್‌ಐ ಸೀತಾರಾಮ ಗೌಡರವರು ಸ್ಥಳಕ್ಕೆ ಭೇಟಿ ನೀಡಿ ಬ್ಯಾಗ್ ಪರಿಶೀಲನೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.