HomePage_Banner
HomePage_Banner
HomePage_Banner
HomePage_Banner

ಸುದ್ದಿ ಬಿಡುಗಡೆಯ ಗ್ರಾಮ ಸ್ವರಾಜ್ಯ ರಥಕ್ಕೆ ಚಾಲನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಎ.ಸಿ. ಡಾ.ಯತೀಶ್ ಉಲ್ಲಾಳ್, ತಹಶೀಲ್ದಾರ್ ರಮೇಶ್ ಬಾಬು, ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್, ನಗರ ಸಭಾಧ್ಯಕ್ಷ ಜೀವಂಧರ ಜೈನ್, ಪೌರಾಯುಕ್ತ ಮಧು ಎಸ್.ಮನೋಹರ್, ತಾ.ಪಂ.ಸಹಾಯಕ ನಿರ್ದೇಶಕಿ ಶೈಲಜಾ ಉಪಸ್ಥಿತಿ

 

ಪುತ್ತೂರು: ಸುದ್ದಿ ಬಿಡುಗಡೆ ಪುತ್ತೂರು ಇದರ ವತಿಯಿಂದ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಗ್ರಾಮ ಸ್ವರಾಜ್ಯ ರಥಕ್ಕೆ ಶನಿವಾರ ಪುತ್ತೂರು ಮಿನಿವಿಧಾನಸೌಧ ಮುಂಭಾಗದಲ್ಲಿ ಚಾಲನೆ ನೀಡಲಾಯಿತು. ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಜೀವಂಧರ ಜೈನ್, ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಡಾ. ಯು.ಪಿ. ಶಿವಾನಂದ್ ಯಶಸ್ವಿಯಾಗಿ ನಡೆಸುತ್ತಿದ್ದಾರೆ. ಅವರು ನಿಂತ ನೀರಾಗದೆ ಸದಾ ಚಟುವಟಿಕೆಯಲ್ಲಿದ್ದು ಅರ್ಥಪೂರ್ಣ ಕಾರ್ಯಕ್ರಮವನ್ನು ಸಂಘಟಿಸುತ್ತಿದ್ದಾರೆ. ಇಂದು ಗ್ರಾಮ ಸ್ವರಾಜ್ಯ ರಥಕ್ಕೆ ಚಾಲನೆ ನೀಡಿದ್ದು, ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.

ಮುಖ್ಯ ಅತಿಥಿಯಾಗಿದ್ದ ಸಹಾಯಕ ಆಯುಕ್ತ ಡಾ. ಯತೀಶ್ ಉಲ್ಲಾಳ್ ಮಾತನಾಡಿ, ಗಾಂಧೀಜಿ ಅವರ ಆಶಯಗಳನ್ನು ಈಡೇರಿಸುವಲ್ಲಿ ಸುದ್ದಿ ಬಿಡುಗಡೆ ಹಮ್ಮಿಕೊಂಡ ಗ್ರಾಮ ಸ್ವರಾಜ್ಯ ರಥ ಯಶಸ್ವಿಯಾಗಲಿ. ನನ್ನ ಉಪವಿಭಾಗ ವ್ಯಾಪ್ತಿಯ ಪುತ್ತೂರು, ಸುಳ್ಯ, ಬೆಳ್ತಂಗಡಿಯಲ್ಲಿ ಸಂಚರಿಸಲಿತುವ ರಥಕ್ಕೆ ಶುಭವಾಗಲಿ ಎಂದು ಶುಭ ಹಾರೈಸಿದರು.

ರಥದಲ್ಲಿ ಮೊಳಗಲಿರುವ ಧ್ವನಿಮುದ್ರಿಕೆಗೆ ಚಾಲನೆ‌ ನೀಡಿದ ಡಿವೈಎಸ್ಪಿ ಡಾ.ಗಾನ ಪಿ. ಕುಮಾರ್ ಮಾತನಾಡಿ, ಕಾರ್ಯಕ್ರಮ ಯಶಸ್ಸಿಗೆ ಹಾರೈಸಿದರು. ಕಾರ್ಯಕ್ರಮ ಹಮ್ಮಿಕೊಂಡಿರುವ ಸುದ್ದಿ ಬಿಡುಗಡೆ‌ ಬಳಗಕ್ಕೆ ಅವರು ಅಭಿನಂದನೆ ತಿಳಿಸಿದರು.

ತಹಶೀಲ್ದಾರ್ ರಮೇಶ್ ಬಾಬು ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಸೌಲಭ್ಯ ಸಿಕ್ಕಾಗ ಸ್ವಾತಂತ್ರ್ಯದ ಆಶಯ ಈಡೇರುತ್ತದೆ. ಡೆಲ್ಲಿಯಿಂದ ಹಳ್ಳಿಯವರೆಗೆ ಪ್ರತಿಯೊಬ್ಬ ವ್ಯಕ್ತಿಗೂ ಸರಕಾರದ ಸೌಲಭ್ಯ ಸಿಗುವಂತಾಗಲಿ ಎಂದು ಹಾರೈಸಿದರು.

ತಾ.ಪಂ ಸಹಾಯಕ ನಿರ್ದೇಶಕಿ ಶೈಲಜಾ ಪ್ರಕಾಶ್ ಮಾತನಾಡಿ, ಜನರಿಗೆ ಸರಕಾರದ ಸೌಲಭ್ಯ ತಲುಪಿಸುವಲ್ಲಿ ಇಂತಹ ಇನ್ನಷ್ಟು ಉತ್ತಮ ಕೆಲಸ ಮಾಡುವಂತಾಗಲಿ ಎಂದು ಹಾರೈಸಿದರು.

ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ‌ ವಿವರ ನೀಡಿದರು.‌ ಸುದ್ದಿ ಬಿಡುಗಡೆ ಪತ್ರಿಕೆ ಮತ್ತು ಸುದ್ದಿ ಚಾನೆಲ್ ಪ್ರಧಾನ ವರದಿಗಾರ ಸಂತೋಷ್ ಕುಮಾರ್ ಶಾಂತಿನಗರ ಸ್ವಾಗತಿಸಿದರು. ಗಣೇಶ್ ಎನ್‌. ಕಲ್ಲರ್ಪೆ ವಂದಿಸಿ, ಪ್ರಧಾನ ನಿರೂಪಕ ಗೌತಮ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್, ನಗರಸಭೆ ಸದಸ್ಯೆ ಇಂದಿರಾ ಪುರುಷೋತ್ತಮ್, ತಾ.ಪಂ. ತಾಲೂಕು ಕಾರ್ಯಕ್ರಮಾಧಿಕಾರಿ ಜಗತ್, ಸಂಜೀವಿನಿ ವಲಯ ಮೇಲ್ವಿಚಾರಕರಾದ ನಮಿತಾ, ನಳಿನಾಕ್ಷಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ. ನಾರಾಯಣ್, ಗುರುಸೇವಾ ಪರಿಷತ್ ಪುತ್ತೂರು ವಲಯ ಅಧ್ಯಕ್ಷ ಪುರುಷೋತ್ತಮ ಆಚಾರ್ಯ, ತಾ.ಪಂ. ಮಾಜಿ ಸದಸ್ಯ ಸಂಕಪ್ಪ ಕುರಿಯ, ತೀರ್ಥಾನಂದ ದುಗ್ಗಳ, ಆರ್ಯಾಪು ಗ್ರಾಪಂ ಸದಸ್ಯ ಯಾಕೂಬ್, ಸುದ್ದಿ ಬಿಡುಗಡೆ ಸಿಇಓ ಸೃಜನ್ ಊರುಬೈಲು ಸಹಿತ ಸುದ್ದಿ ಬಳಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.