HomePage_Banner
HomePage_Banner
HomePage_Banner
HomePage_Banner

ಪಣೋಲಿಬೈಲು ಬಳಿ ಬೈಕಿನಲ್ಲಿ ಬಂದು ಮಹಿಳೆಯ ಕರಿಮಣಿ ಸರ ಸುಲಿಗೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ಆರ್ಯಾಪು ನಿವಾಸಿ ಆರೋಪಿಗಳ ಬಂಧನ

ಪುತ್ತೂರು: ಬಂಟ್ವಾಳ ತಾಲೂಕಿನ ಪಣೋಲಿಬೈಲು ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಕತ್ತನಿಂದ ಕರಿಮಣಿ ಸರ ಕಿತ್ತು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬಂಟ್ವಾಳ ಡಿ.ವೈ.ಎಸ್.ಪಿ ತಂಡ ಹಾಗೂ ಬಂಟ್ವಾಳ ನಗರ ಠಾಣಾ ಪೊಲೀಸರು ಆರ್ಯಾಪು ಗ್ರಾಮದ ನಿವಾಸಿಗಳಾಗಿರುವ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರ್ಯಾಪು ಗ್ರಾಮದ ವಳತ್ತಡ್ಕ ದಿ.ಶೇಖರ್ ಕುಲಾಲ್‌ರವರ ಪುತ್ರ ರೋಹಿತ್(22ವ.) ಹಾಗೂ ಕುಂಜೂರುಪಂಜ ದೇವಸ್ಯ ರಾಮಣ್ಣ ನಾಯ್ಕರ ಪುತ್ರ ಲೋಹಿತ್ ಪಿ.ಆರ್ ಯಾನೆ ಸಚಿನ್ ಯಾನೆ ಸಚ್ಚು(20ವ.)ಬಂಧಿತ ಆರೋಪಿಗಳು.ಸುಲಿಗೆ ಮಾಡಿದ ಮಾಂಗಲ್ಯ ಸರ ಹಾಗೂ ಸುಲಿಗೆ ಮಾಡಲು ಉಪಯೋಗಿಸಿದ ಅಪಾಚಿ ಮೋಟಾರು ಸೈಕಲನ್ನು ಬಂಧಿತರಿಂದ ಸ್ವಾಧೀನಪಡಿಸಿಕೊಳ್ಳಲಾಗಿದೆ.ಸ್ವಾಧೀನಪಡಿಸಿಕೊಂಡ ಸೊತ್ತುಗಳ ಮೌಲ್ಯ ರೂ.1,35,000 ಆಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆ.18ರಂದು ಮಧ್ಯಾಹ್ನದ ವೇಳೆ ಬೈಕಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪಣೋಲಿಬೈಲು ಬಳಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆ ವತ್ಸಲಾ(53ವ.)ಎಂಬವರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಬಲವಂತವಾಗಿ ಕಿತ್ತು ಪರಾರಿಯಾಗಿದ್ದರು.ಘಟನೆಯ ಕುರಿತು ಮಹಿಳೆಯು ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದರು.ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಷ್ ಭಗವಾನ್ ಸೋನಾವಣೆರವರ ನಿರ್ದೇಶನದಂತೆ ದ.ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ|ಶಿವಕುಮಾರ್ ಗುಣಾರೆರವರ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ವೆಲೈಂಟೈನ್ ಡಿಸೋಜಾರವರ ನೇತೃತ್ವದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಟಿ.ಡಿ.ನಾಗರಾಜ್, ಬಂಟ್ವಾಳ ನಗರ ಠಾಣಾ ಪಿ.ಎಸ್.ಐ ಅವಿನಾಶ್ ಗೌಡ, ಅಪರಾಧ ಪತ್ತೆ ವಿಭಾಗದ ಪಿ.ಎಸ್.ಐ ಕಲೈಮಾರ್, ಬಂಟ್ವಾಳ ಡಿ.ವೈ.ಎಸ್.ಪಿ ತಂಡದ ಉದಯ ರೈ, ಪ್ರವೀಣ್ ಎಂ, ಪ್ರಶಾಂತ್, ಇರ್ಷಾದ್, ಕುಮಾರ್ ಹೆಚ್.ಕೆ, ಹಾಗೂ ಬಂಟ್ವಾಳ ನಗರ ಠಾಣಾ ಸಿಬ್ಬಂದಿಗಳಾದ ಜಗನ್ನಾಥ ಶೆಟ್ಟಿ, ಕೃಷ್ಣ ಕುಲಾಲ್ ಮತ್ತು ಹೋಮ್ ಗಾರ್ಡ್ ಸಿಬ್ಬಂದಿ ಜಯಗಣೇಶ್ ಆರೋಪಿಗಳ ಬಂಧನ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಈ ಕ್ಲಿಷ್ಟಕರವಾದ ಪ್ರಕರಣವನ್ನು ಅತಿಶೀಘ್ರವಾಗಿ ಭೇದಿಸಿದ ಪೊಲೀಸ್ ತಂಡವನ್ನು ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.