HomePage_Banner
HomePage_Banner
HomePage_Banner
HomePage_Banner

ಬಿಜೆಪಿ ನಗರಮಂಡಲದ ಎಸ್ಸಿ ಮೋರ್ಚಾ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನಾ ಪೋಸ್ಟ್ ಕಾರ್ಡ್ ಅಭಿಯಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಅ.7ರ ತನಕ ನಡೆಯಲಿರುವ 20 ದಿನಗಳ ಸೇವಾ ಮತ್ತು ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿ ಅವರ ಜೀವ ಮತ್ತು ಸಾಧನೆಗಳ ಕುರಿತು ವಿವಿಧ ಕಾರ್ಯಕ್ರಮ ನಡೆಯುತ್ತಿದ್ದು, ಪ್ರಧಾನಿಯವರು ಬಡವರಿಗಾಗಿ ಕೈಗೊಂಡ ಕಲ್ಯಾಣ ಕಾರ್ಯಗಳಿಗೆ ಧನ್ಯವಾದ ತಿಳಿಸುವ ಪೋಸ್ಟ್ ಕಾರ್ಡ್ ಅಭಿಯಾನ ಪ್ರತಿ ಬೂತಿನಲ್ಲಿ ನಡೆಯುತ್ತಿದ್ದು, ಸೆ.19ರಂದು ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ನಗರಮಂಡಲದ ಎಸ್ಸಿ ಮೋರ್ಚಾದ ಕಾರ್ಯಕಾರಿಣಿ ಸಮಿತಿಯಲ್ಲಿ ನಡೆಯಿತು.

ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಎಸ್ಸಿ ಮೋರ್ಚಾದ ಪ್ರಭಾರಿ ಚಂದ್ರಕಲಾ, ಜಿಲ್ಲಾ ಉಪಾಧ್ಯಕ್ಷ ರಾಘವ ಕಲ್ಮಂಜ ಅವರು ನಗರ ಮಂಡಲದಲ್ಲಿ ಎಸ್ಸಿ ಮೋರ್ಚಾದ ಬಲಪಡಿಸುವಿಕೆ ಮತ್ತು ಕಾಲನಿಯ ಅಭಿವೃದ್ಧಿ ಕುರಿತು ಮಾಹಿತಿ ನೀಡಿದ ಅವರು ಪೋಸ್ಟ್ ಕಾರ್ಡ್ ಅಭಿಯಾನವನ್ನು ನಡೆಸಿದರು. ಎಸ್ಸಿ ಮೋರ್ಚಾದ ಅಧ್ಯಕ್ಷ ತಿಮ್ಮಪ್ಪ ನೀರ್ಪಾಜೆ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ಜ್ಯೋತಿ ಆರ್ ನಾಯಕ್, ಗೋವರ್ದನ, ಅರ್ಪಣಾ ಪಡೀಲ್, ವಿನೋದ್ ಆನೆಮಜಲು, ಪ್ರವೀಣ್ ನೀರ್ಪಾಜೆ, ಆನಂದ ಆನೆಮಜಲು, ವಸಂತ ಬಪ್ಪಳಿಗೆ, ಸಂಜೀವ ನೆಲ್ಲಿಗುಂಡಿ, ತಿಮ್ಮಪ್ಪ ನೀರ್ಪಾಜೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಭಾರತ ಮಾತೆ, ಶ್ಯಾಮ ಪ್ರಸಾದ್ ಮುಖರ್ಜಿ, ದೀನ್‌ದಯಾಳ್ ಉಪಾಧ್ಯಾಯ, ಡಾ, ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.